News Karnataka Kannada
Friday, May 03 2024
ರಾಜಸ್ಥಾನ

ಇಂದು ಜೈಪುರದ ಸಿಐಪಿಇಟಿ’ಗೆ ಪ್ರಧಾನಿ ಮೋದಿ ಚಾಲನೆ: 4 ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ

Modi
Photo Credit :

ಜೈಪುರ :  ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.

ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜಸ್ಥಾನದ ಬನ್ಸ್‌ವಾರಾ, ಸಿರೋಹಿ, ಹನುಮಾನ್‌ಗಢ ಮತ್ತು ಡೌಸಾ ಜಿಲ್ಲೆಗಳಲ್ಲಿ ನಾಲ್ಕು ಹೊಸ ವೈದ್ಯಕೀಯ ಕಾಲೇಜುಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಜಿಲ್ಲಾ/ ರೆಫರಲ್ ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಯಡಿ ಈ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ.

ಸೌಲಭ್ಯವಂಚಿತ, ಹಿಂದುಳಿದ ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ಆದ್ಯತೆ ಮೇರೆಗೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಅನುದಾನದಡಿ ಮೂರು ಹಂತಗಳಲ್ಲಿ ಒಟ್ಟು 157 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜಸ್ಥಾನ ಸರಕಾರ ಮತ್ತು ಭಾರತ ಸರಕಾರ ಜಂಟಿಯಾಗಿ ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯನ್ನು (ಸಿಪಿಇಟಿ) ಸ್ಥಾಪಿಸಿವೆ. ಇದು ಸ್ವಾವಲಂಬಿ ಸಂಸ್ಥೆಯಾಗಿದ್ದು ಪೆಟ್ರೋಕೆಮಿಕಲ್ ಮತ್ತು ಸಬಂಧಿತ ಕೈಗಾರಿಕೆಗಳ ಅಗತ್ಯಗಳನ್ನು ಪೂರೈಸುತ್ತದೆ. ಮತ್ತು ಇದು ನುರಿತ ತಾಂತ್ರಿಕ ವೃತ್ತಿಪರರಾಗಲು ಯುವಜನತೆಗೆ ಶಿಕ್ಷಣವನ್ನು ಒದಗಿಸುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು