ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ವರನ ತಾಯಿ ಕುಸಿದು ಬಿದ್ದು ಸಾವು

ಅಲ್ವಾರ್ : ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮದುವೆ ಮೆರವಣಿಗೆ ವೇಳೇ ವರನ ತಾಯಿ ನೃತ್ಯ ಮಾಡುವಾಗ ಅವನ ತೋಳುಗಳಲ್ಲಿ ಕುಸಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೊವು ವೈರಲ್‌ ಆಗಿದೆ. 55 ವರ್ಷದ ನೀಲಂ ತನ್ನ ಮಗನ ಮದುವೆ ಮೆರವಣಿಗೆಯಲ್ಲಿ ಡಿಜೆ ಟ್ಯೂನ್‌ಗೆ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ತನ್ನ ತಾಯಿ ಕುಸಿದು ಬೀಳುತ್ತಿದ್ದ ಹಾಗೇ ಆಕೆಯ ಮಗ, ವರ ನೀರಜ್ ಅವಳನ್ನು ಹಿಡಿದುಕೊಂಡಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ನೀಲಂ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 3 ರಂದು ನೀರಜ್ ಅವರ ಮದುವೆಯ ಮೆರವಣಿಗೆಯು ಚಿಕಾನಿಯಲ್ಲಿರುವ ಅವರ ಮನೆಯಿಂದ ಮರುದಿನ ಅಲ್ವಾರ್ ಜಿಲ್ಲೆಯ ಕಿಶನ್‌ಗಢ್ ಬಾಸ್‌ನಲ್ಲಿ ಅವರ ಮದುವೆಗೆ ಹೊರಟಿದ್ದಾಗ ಈ ಘಟನೆ ಸಂಭವಿಸಿದೆ. ನೀಲಂಗೆ ಮೊದಲೇ ಹೃದಯ ಸಂಬಂಧಿ ಸಮಸ್ಯೆಗಳಿದ್ದು, ಅದಕ್ಕಾಗಿ ಔಷಧೋಪಚಾರ ತೆಗೆದುಕೊಳ್ಳುತ್ತಿದ್ದಾರಂತೆ. ಈ ಘಟನೆಯ ನಂತರ ಸಂಭ್ರಮಾಚರಣೆಗೆ ಸಜ್ಜಾಗಿದ್ದ ಕುಟುಂಬ ಶೋಕದಲ್ಲಿ ಮುಳುಗಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago