ಜೈಪುರ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಸೆಂಬರ್ 15 ರಂದು ಈ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿತ್ತು ಮತ್ತು ಜ್ವರ, ಕೆಮ್ಮು ಹಾಗೂ ಮೂಗು ಸೋರುವಿಕೆಯಂತಹ ರೋಗಲಕ್ಷಣಗಳನ್ನು ಹೊಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಾ ಖಾರಾಡಿ ಹೇಳಿದ್ದಾರೆ.
ಮೃತ ವ್ಯಕ್ತಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್ ಅನ್ನು ಹೊಂದಿದ್ದರು. ಈ ಸ್ಥಿತಿಯಲ್ಲಿ ವೈರಸ್ ದೇಹದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಲ್ಲದೆ ಮಧುಮೇಹ ಹೊಂದಿರುವ ರೋಗಿ ಹೆಚ್ಚಿನ ಪ್ರಮಾಣದಲ್ಲಿ ಅಪಾಯ ಇರುತ್ತದೆ ಎಂದು ಡಾ.ದಿನೇಶ್ ಖಾರಾಡಿ ಅವರು ತಿಳಿಸಿದ್ದಾರೆ.
ಡಿಸೆಂಬರ್ 21 ಮತ್ತು 25 ರಂದು ಈ ವ್ಯಕ್ತಿಗೆ ಎರಡು ಬಾರಿ ಕೊರೋನಾ ನೆಗೆಟಿವ್ ಬಂದಿತ್ತು. ಆದರೆ ಅವರು ಕೋವಿಡ್ ನಂತರ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ಉದಯಪುರ CMHO ಡಾ ದಿನೇಶ್ ಖರಾಡಿ ಅವರು ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…