ವರದಕ್ಷಿಣೆಗಾಗಿ ಪತ್ನಿಯ ಮೇಲೆ ಗ್ಯಾಂಗ್​​ರೇಪ್​ ಮಾಡಿಸಿ ​ವಿಡಿಯೋ ಹರಿಬಿಟ್ಟ ಪತಿ

ಭರತ್‌ಪುರ : ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ.

ಸಂತ್ರಸ್ತೆಯು 1.5 ಲಕ್ಷ ರೂ. ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರಿಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಮಹಿಳೆಯೊಬ್ಬರು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಿದ್ದು, ಯೂಟ್ಯೂಬ್ ಗೆ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಭರತ್‌ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದ ವಿಡಿಯೋ ಕುರಿತಂತೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನಲ್ಲಿ, ‘2019ರಲ್ಲಿ ನನ್ನ ಮದುವೆಯಾಗಿತ್ತು. ನನ್ನ ಅತ್ತೆಯಂದಿರು ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದರು. ನನ್ನ ಪೋಷಕರು ವರದಕ್ಷಿಣೆ ಬದಲಿಗೆ ನಮ್ಮ ಸ್ವಂತ ಮನೆಯನ್ನೇ ನೀಡುತ್ತೇವೆ ಎಂದು ಹೇಳಿದ್ದರು. ಆದರೂ ಅದಕ್ಕೆ ತೃಪ್ತಿಯಾಗದೇ ನನ್ನ ಪತಿಯ ಸಂಬಂಧಿಕರು ಹಣಕ್ಕಾಗಿ ಪೀಡಿಸುತ್ತಿದ್ದರು. ಬಳಿಕ ನನ್ನ ಪತಿಯನ್ನು ನನ್ನ ಪೋಷಕರು ಸಂತೈಸಿ ಅವರೊಂದಿಗೆ ನನ್ನನ್ನು ಕಳುಹಿಸಿಕೊಟ್ಟರು.

ಬಳಿಕ ಒಂದು ದಿನ ನನ್ನ ಪತಿ ತನ್ನ ಸ್ನೇಹಿತ ಮತ್ತು ಸಂಬಂಧಿಕರನ್ನು ಮನೆಗೆ ಕರೆದುಕೊಂಡು ಬಂದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡುವಂತೆ ಹೇಳಿದರು. ಅಲ್ಲದೆ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಯೂಟ್ಯೂಬ್ ಗೆ ಅಪ್ಲೋಡ್ ಮಾಡುವಂತೆ ಹೇಳಿದರು. ಅದರಂತೆ ಪತಿಯ ಸ್ನೇಹಿತ ಮತ್ತು ಸಂಬಂಧಿಕ ವ್ಯಕ್ತಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದರು. ನಂತರ ಆ ವೀಡಿಯೊಗಳನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ.

‘ನಿಮ್ಮ ಕುಟುಂಬದ ಸದಸ್ಯರು ನನಗೆ ವರದಕ್ಷಿಣೆ ನೀಡಲು ಸಾಧ್ಯವಿಲ್ಲ, ಆದರೆ ಈಗ ನಾನು ಈ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಹಾಕುವ ಮೂಲಕ ಅದೇ ಮೊತ್ತವನ್ನು ಗಳಿಸುತ್ತೇನೆ’ ಎಂದು ಹೇಳಿಕೆ ನೀಡಿ ಅಶ್ಲೀಲ ವೀಡಿಯೊವನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ವಿಡಿಯೋವನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂಬ ಆರೋಪಗಳಿಗೆ ಇನ್ನೂ ಸಾಕ್ಷಿ ಅಥವಾ ವಿಡಿಯೋ ಪತ್ತೆಯಾಗಿಲ್ಲ. ಈ ಬಗ್ಗೆ ತನಿಖೆ ಮುಂದುವರೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago