ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ

ಅಲ್ವಾರ್,ಡಿ.8 : ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮೊದಲಿನಿಂದಲೂ ಪ್ರಚಲಿತದಲ್ಲಿದೆ. ರಾಜಸ್ತಾನದ ಈ ಪೈಶಾಚಿಕ ಕೃತ್ಯ ಇದಕ್ಕೆ ಅನ್ವರ್ಥವಾಗಿದ್ದು, ಗುರು-ಶಿಷ್ಯ ಪರಂಪರೆಗೆ ಕಳಂಕ ತರುವಂತಿದೆ. ರಾಜಸ್ತಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರು ಮತ್ತು 9 ಮಂದಿ ಶಿಕ್ಷಕರು ನಾಲ್ಕು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಹಾಗೂ ವಿಕೃತ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೇಸು ದಾಖಲಾಗುತ್ತಿದ್ದಂತೆ ಶಾಲೆಯ ಮತ್ತಷ್ಟು ವಿದ್ಯಾರ್ಥಿನಿಯರು ತಮ್ಮ ಮೇಲಾದ ದೌರ್ಜನ್ಯ ಹೇಳಿಕೊಳ್ಳಲು ಮುಂದೆ ಬಂದಿದ್ದಾರೆ. ದುರಂತವೆಂದರೆ ಪುರುಷ ಶಿಕ್ಷಕರ ಪೈಶಾಚಿಕ ಕೃತ್ಯಕ್ಕೆ ಮಹಿಳಾ ಶಿಕ್ಷಕಿಯರು ಸಾಥ್ ನೀಡಿರುವುದು ಆಘಾತ ತಂದಿದೆ. ಎಲ್ಲಾ ಆರೋಪಿಗಳು ಸದ್ಯಕ್ಕೆ ತಲೆ ಮರೆಸಿಕೊಂಡಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ಹೋಗಲು ನಿರಾಕರಿಸಿದ್ದರು. ಆಕೆಯ ತಂದೆ ಕಾರಣ ಕೇಳಿದಾಗ ಮುಜುಗರದಿಂದಲೇ ವಿಷಯ ಬಾಯಿಬಿಟ್ಟಿದ್ದು, ಶಾಲಾ ಪ್ರಾಂಶುಪಾಲರು ಹಾಗೂ ಮೂವರು ಶಿಕ್ಷಕರು ಒಂದು ವರ್ಷದಿಂದಲೂ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಅದಕ್ಕೆ ಇಬ್ಬರು ಮಹಿಳಾ ಶಿಕ್ಷಕಿಯರು ಸಹಕಾರ ನೀಡಿ ವಿಡಿಯೋ ಚಿತ್ರೀಕರಿಸಿಕೊಂಡಿರುವುದಾಗಿ ತಿಳಿಸಿದ್ದಾಳೆ.

ಬಾಲಕಿಯ ಮಾಹಿತಿ ಆಧರಿಸಿ ಮಂಧಾನ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಅಧಿಕಾರಿ ಮುಖೇಶ್‍ಯಾದವ್ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ಮೂರು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ವಿಚಾರಣೆ ಮುಂದುವರೆಸಲಾಗಿದೆ ಎಂದಿದ್ದಾರೆ.

ಪೊಲೀಸರು ವಿಚಾರಣೆ ಆರಂಭಿಸುತ್ತಿದ್ದಂತೆ 6,4 ಹಾಗೂ 3ನೇ ತರಗತಿಯ ವಿದ್ಯಾರ್ಥಿಗಳು ಮುಂದೆ ಬಂದಿದ್ದು, ಪ್ರಾಂಶುಪಾಲರು ಹಾಗೂ ಶಿಕ್ಷಕರಿಂದ ತಮಗಾದ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊದಲ ಹಂತದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ದೂರು ದಾಖಲಾಗಿದೆ. ಒಬ್ಬ ವಿದ್ಯಾರ್ಥಿನಿ ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಶಿಕ್ಷಕಿಯರಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಅವರಿಂದಲೂ ವಿದ್ಯಾರ್ಥಿನಿಯರ ಬಾಯಿ ಮುಚ್ಚಿಸಲಾಗಿದ್ದು, ಶಾಲೆ ಶುಲ್ಕ ಮತ್ತು ಪುಸ್ತಕಗಳ ಖರ್ಚನ್ನು ಕೊಡಿಸುವುದಾಗಿ ಸಮಾಧಾನ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಹಿಳಾ ಶಿಕ್ಷಕಿಯರೇ ವಿದ್ಯಾರ್ಥಿನಿಯನ್ನು ಮೂರು ಜನ ಶಿಕ್ಷಕರು ಸೇರಿದ್ದ ಮನೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪ್ರಾಂಶುಪಾಲರು ಇದ್ದರು. ಎಲ್ಲರೂ ಮದ್ಯಪಾನ ಮಾಡಿದ್ದರು. ನನ್ನ ಬಟ್ಟೆ ಕಳಚಿ ದೌರ್ಜನ್ಯ ವೆಸಗಿದ್ದರು ಎಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.

ಘಟನೆ ಬಗ್ಗೆ ಯಾರ ಬಳಿಯೂ ಹೇಳಿಕೊಳ್ಳಬಾರದು ಎಂದು ವಿದ್ಯಾರ್ಥಿನಿಯರಿಗೆ ಪ್ರಾಣ ಬೆದರಿಕೆ ಒಡ್ಡಲಾಗಿತ್ತು. ವಿದ್ಯಾರ್ಥಿನಿಯ ತಂದೆ ಠಾಣೆಗೆ ದೂರು ನೀಡಲು ಹೋದಾಗ ಅವರ ಮೇಲೂ ಸಾಕಷ್ಟು ಒತ್ತಡ ಹೇರಿದ್ದು, ಖುದ್ದು ಪ್ರಾಂಶುಪಾಲರೇ ಹತ್ಯೆಯ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Gayathri SG

Recent Posts

ಜಿಯೋ ಭರ್ಜರಿ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 min ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

23 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

41 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

55 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago