ರಾಜಸ್ಥಾನ

ಸಿಡಿಎಸ್ ಬಿಪಿನ್ ರಾವತ್ ವಿರುದ್ಧ ಅವಹೇಳನಕಾರಿ ಸಂದೇಶ, ವ್ಯಕ್ತಿಯ ಬಂಧನ

ಜೈಪುರ: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ  ಜಾವೇದ್ ಖಾನ್ (21)  ಎಂಬ ವ್ಯಕ್ತಿಯೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಜಾವೇದ್ ಖಾನ್ (21) ಟೊಂಕ್‌ ನಗರದ ನಜಾರ್‌ಬಾಗ್ ರಸ್ತೆಯ ನಿವಾಸಿ’ ಎಂದು ಟೊಂಕ್‌ನ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಆರೋಪಿಯ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ.

Swathi MG

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

14 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

24 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago