ರಾಜಸ್ಥಾನ: ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಯ ಪ್ರಾಣಪಕ್ಷಿ ಹಾರಿಹೋಗುವಂತೆ ಶಿಕ್ಷಕನೋರ್ವ ಥಳಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಖಾಸಗಿ ಶಾಲೆಯಲ್ಲಿ ನಡೆದಿದೆ.
13 ವರ್ಷದ ವಿದ್ಯಾರ್ಥಿ ಗಣೇಶ್ ಮೃತ ದುರ್ದೈವಿ. ಈತ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಹೋಮ್ ವರ್ಕ್ ಮಾಡಿಲ್ಲವೆಂದು ಶಿಕ್ಷಕನೋರ್ವ ಆತನ ಮೇಲೆ ತೀವ್ರವಾಗಿ ಥಳಿಸಿದ್ದಾನೆ.
ಹೊಡೆತದ ನಂತರ ಬಾಲಕನ ಮೂಗಿನಿಂದ ರಕ್ತ ಬರಲಾರಂಭಿಸಿದೆ. ಬಳಿಕ ಆತ ಪ್ರಜ್ಷೆ ತಪ್ಪಿ ಬಿದ್ದಿದ್ದಾನೆ. ಪ್ರಜ್ಞೆ ಮರಳಿದ ಮೇಲೆ ಆರೋಪಿತ ಶಿಕ್ಷಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲಿ ವೈದ್ಯರು ವಿದ್ಯಾರ್ಥಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ಮುಗಿಯುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ದೋಟಸ್ರಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.