News Karnataka Kannada
Sunday, April 28 2024
ರಾಜಸ್ಥಾನ

ಶಿವರಾತ್ರಿ ಮೆರವಣಿಗೆ ವೇಳೆ ವಿದ್ಯುತ್‌ ಶಾಕ್‌: ಮೈಪೂರ್ತಿ ಸುಟ್ಟುಕೊಂಡ 17 ಮಕ್ಕಳು !

Rajastan
Photo Credit : News Kannada

ರಾಜಸ್ಥಾನ: ಕೋಟಾದಲ್ಲಿ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಇಂದು ಹದಿನೇಳು ಮಕ್ಕಳು ಮತ್ತು ಮಹಿಳೆಯೊಬ್ಬರು ಕರೆಂಟ್ ಶಾಕ್‌ನಿಂದ ತಮ್ಮ ಮೈಪೂರ್ತಿ ಸುಟ್ಟುಕೊಂಡಿದ್ದಾರೆ. ಇವರ ಪೈಕಿ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಳಿ ಬಸ್ತಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದ ಮೆರವಣಿಗೆಯ ವೇಳೆ ಈ ಘಟನೆ ನಡೆದಿದೆ. ಈ ಘಟನೆ ನಡೆದ ಕುಂಹಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಅರವಿಂದ ಭಾರಧ್ವಾಜ್ ಅವರು ನೀಡಿದ ಮಾಹಿತಿ ಪ್ರಕಾರ, ಮಕ್ಕಳ ತಂಡವು ಮೆರವಣಿಗೆಯ ಭಾಗವಾಗಿತ್ತು ಮತ್ತು ಒಂದು ದೇವಸ್ಥಾನದಿಂದ ಇನ್ನೊಂದು ದೇವಸ್ಥಾನಕ್ಕೆ ಕಲಶವನ್ನು (ಪಾತ್ರೆ) ಹೊತ್ತುಕೊಂಡು ಹೋಗುತ್ತಿತ್ತು ಈ ವೇಳೆ ಘಟನೆ ನಡೆದಿದೆ ಎಂದಿದ್ದಾರೆ.

ಕಾಲೋನಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳು ಕಬ್ಬಿಣದ ರಾಡ್‌ನಲ್ಲಿ ಧ್ವಜವನ್ನು ಹಾರಿಸಿದ್ದರು. ರಾಡ್ ಹೈಟೆನ್ಷನ್ ತಂತಿಗೆ ತಗುಲಿ ಮಹಿಳೆಯೊಂದಿಗೆ ಮಕ್ಕಳು ವಿದ್ಯುತ್ ಶಾಕ್‌ಗೆ ತುತ್ತಾಗಿದ್ದಾರೆ. ಅವರೆಲ್ಲರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.. ಮಕ್ಕಳ ಪೈಕಿ ಒಬ್ಬರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಂತಾಜನಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕೋಟಾದ ಎಂಬಿಎಸ್ ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು 9 ರಿಂದ 16 ವರ್ಷದೊಳಗಿನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು