News Karnataka Kannada
Wednesday, May 01 2024
ರಾಜಸ್ಥಾನ

ಕಾರು ಟ್ರಕ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಭಾನುವಾರ   ತಡರಾತ್ರಿ ನಡೆದಿದೆ.
Photo Credit : NewsKarnataka

ರಾಜಸ್ಥಾನ:  ಕಾರೊಂದು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.

ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ.

ಮೃತರನ್ನು ನೀಲಂ ಗೋಯಲ್ (55), ಅವರ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಮಗ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.

ಕಾರು ಪ್ರಯಾಣಿಕರು, ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್‌ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಇನ್ನೊಂದು ವಾಹನ ಬಂದಾಗ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್‌ಪಿಜಿ ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್‌ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಅಲ್ಲಿದ್ದವರು ಹರಸಾಹಸ ಮಾಡಿದರೂ ಬೆಂಕಿಯ ರಭಸಕ್ಕೆ ಕಾರು ಪ್ರಯಾಣಿಕರು ಬೀಗ ಹಾಕಿದ್ದ ಬಾಗಿಲು ತೆರೆಯಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು