ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನ ಡಿಕ್ಕಿ: 6 ಜನ ಮೃತ್ಯು

ಜೈಪುರ್: ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಬನಾಸ್ ನದಿ ಸೇತುವೆ ಬಳಿ ನಡೆದಿದೆ.

ಮೃತರನ್ನು ಮನೀಶ್ ಶರ್ಮಾ, ಇವರ ಪತ್ನಿ ಅನಿತಾ, ಕೈಲಾಶ್ ಶರ್ಮಾ, ಇವರ ಪತ್ನಿ ಸಂತೋಷ ಮತ್ತು ಸತೀಶ್ ಶರ್ಮಾ ಇವರ ಪತ್ನಿ ಪೂನಂ ಎಂದು ಗುರುತಿಸಲಾಗಿದೆ.

ಇವರ ಇಬ್ಬರು ಮಕ್ಕಳಾದ ಮನಾನ್ ಮತ್ತು ದೀಪಾಲಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಶರ್ಮಾ ಕುಟುಂಬವು ಸವಾಯಿ ಮಾಧೋಪುರದಲ್ಲಿನ ಗಣೇಶ ದೇವಸ್ಥಾನಕ್ಕೆ ಕಾರಿನ ಮೂಲಕ ಹೋಗುತ್ತಿದ್ದರು. ಈ ವೇಳೆ ಬನಾಸ್ ನದಿಯ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ 8 ಜನರ ಪೈಕಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಡಿಕ್ಕಿಯಾದ ವಾಹನ ಘಟನಾ ಸ್ಥಳದಲ್ಲೇ ನಿಲ್ಲಿಸದೇ ಅಲ್ಲಿಂದ ಹಾಗೇ ಹೋಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದು ಶೀಘ್ರದಲ್ಲೇ ಆ ವಾಹನವನ್ನು ಪತ್ತೆ ಹಚ್ಚಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Chaitra Kulal

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago