News Karnataka Kannada
Sunday, April 28 2024
ರಾಜಸ್ಥಾನ

ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ: ಈ ವರ್ಷ ಇದು 26ನೇ ಕೇಸ್‌

Another NEET aspirant commits suicide, this is the 26th case this year
Photo Credit : News Kannada

ರಾಜಸ್ತಾನ: ಉತ್ತರ ಪ್ರದೇಶದ 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ. ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೂರು ಗಂಟೆಗಳ ಬಳಿಕ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮವು ನಿವಾಸಿಯಾಗಿರುವ 12 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಸ್ ಸಿಂಗ್ ಆಗಿದ್ದು, ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓಇಇಖಿ-Uಉ ಗೆ ತಯಾರಿ ನಡೆಸುತ್ತಿದ್ದರು. ಇಲ್ಲಿನ ವಿಜ್ಞಾನನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು ಎಂದು ಡಿಎಸ್‌ಪಿ ಧರಂವೀರ್ ಸಿಂಗ್ ಹೇಳಿದ್ದಾರೆ.

ಸೋಮವಾರ ವಿದ್ಯಾರ್ಥಿನಿ ತನ್ನ ಕೋಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವರ್ಷ ಕೋಟಾದಲ್ಲಿ ಕೋಚಿಂಗ್‌ ಗೆ ಆಗಮಿಸಿದ ವಿದ್ಯಾರ್ಥಿಗಳು ಸಾವಿಗೆ ಶರಣಾದ ಪ್ರಕರಣಾದ 26ನೇ ಕೇಸ್‌ ಇದಾಗಿದೆ. ಆಗಸ್ಟ್ ನಲ್ಲಿ ಆರು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು