ಜೈಪುರ: ವಿದೇಶಿ ಪ್ರವಾಸಿ ಮಹಿಳೆಯನ್ನು ಆಟೋ ಚಾಲಕನೊಬ್ಬ ಚುಡಾಯಿಸಿ ಅನುಚಿತವಾಗಿ ಸ್ಪರ್ಶಿಸಿದ ವಿಡಿಯೋವೊಂದು ವೈರಲ್ ಆಗಿದೆ.
ಈ ವಿಡಿಯೋವನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಶೇರ್ ಮಾಡಿದ್ದಾರೆ. ಅಲ್ಲದೆ ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ವಿಡಿಯೋವನ್ನು ಕಳುಹಿಸಿದ್ದಾರೆ. ಪೊಲೀಸರು ಘಟನೆ ನಡೆದ ಸ್ಥಳವನ್ನು ವಿಧಾಯಕಪುರಿ ಠಾಣೆ ಪ್ರದೇಶ ಎಂದು ಗುರುತಿಸಿದ್ದು, ಆ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ.
ವಿಡಿಯೋದಲ್ಲಿ ವಿದೇಶಿ ಮಹಿಳೆಯ ಖಾಸಗಿ ಭಾಗಗಳನ್ನು ಸ್ಪರ್ಶಿಸುತ್ತಿರುವ ಆರೋಪಿ ಆಟೋ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.