ತಾಲಿಬಾನ್‌ ಅಂತ್ಯಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ: ಯೋಗಿ ಆದಿತ್ಯನಾಥ್‌

ರಾಜಸ್ಥಾನ್: ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ನಡುವೆಯೇ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು, ಇಸ್ರೇಲ್-ಹಮಾಸ್ ಯುದ್ಧದ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿದ್ದು, ರಾಷ್ಟ್ರೀಯ ಪಕ್ಷಗಳ ಪ್ರಚಾರ ಶುರುವಾಗಿದೆ. ರಾಜಸ್ಥಾನದ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಗಿದ್ದರು. ಈ ವೇಳೆ ರಾಜಸ್ಥಾನದ ಅಲ್ವಾರ್ ನಲ್ಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಗಾಜಾದಲ್ಲಿ ತಾಲಿಬಾನಿ ಮನಸ್ಥಿತಿಯ ಜನರನ್ನು ಹೇಗೆ ಕೊನೆಗಾಣಿಸಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ಅವರ ಅಡಗುತಾಣಗಳನ್ನು ಕರಾರುವಕ್ಕಾಗಿ ಹುಡುಕಿ ನಾಶಮಾಡಲಾಗುತ್ತಿದೆ.

ಅದೇ ರೀತಿ ತಾಲಿಬಾನಿಗಳನ್ನು ಮಟ್ಟಹಾಕಲು ಹನುಮಂತನ ಗದೆಯೇ ಪರಿಹಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗಾಜಾದಲ್ಲಿ ಇಸ್ರೇಲ್​​​​​ ಹಮಾಸ್​​​ ಮನಸ್ಥಿತಿಯ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಾ. ಇದರ ಹಿಂದೆ ಗಾಜಾ ಜನರು ಮಾಡಿದ ತಪ್ಪು ಇದೆ. ಅವರು ಹಮಾಸ್​​ ಎಂಬ ಉಗ್ರ ಸಂಘಟನೆಯನ್ನು ಗೆಲ್ಲಿಸಿದಕ್ಕೆ ಈ ಪರಿಸ್ಥಿತಿ ಬಂದಿದೆ. ಇನ್ನು ಇದಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ. ಇನ್ನು ಈ ತಪ್ಪುವನ್ನು ನೀವು ಮಾಡಬೇಡಿ ಎಂದು ಕಾಂಗ್ರೆಸ್​​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ “ಅರಾಜಕತೆ, ಗೂಂಡಾಗಿರಿ ಮತ್ತು ಭಯೋತ್ಪಾದನೆ ಸಮಾಜಕ್ಕೆ ಶಾಪವಾಗಿದೆ, ಸುಸಂಸ್ಕೃತ ಸಮಾಜದ ಮೇಲೆ ರಾಜಕೀಯ ದಾಳಿಗಳು ನಡೆದಾಗ ಸುಸಂಸ್ಕೃತ ಸಮಾಜದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ ಎಂದರು.

ರಾಜಸ್ಥಾನದಲ್ಲಿ ಮಹಿಳೆಯ ಮೇಲಿ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ರಾಜಸ್ಥಾನ ಸರ್ಕಾರವನ್ನು ತರಟೆಗೆ ತೆಗೆದುಕೊಂಡಿದ್ದಾರೆ. ಒಂದು ವೇಳೆ ಮತ್ತೆ ಕಾಂಗ್ರೆಸ್​​ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದರೆ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಾರೆ ಎಂಬುದನ್ನು ನೆನಪಿಡಿ. ತಾಲಿಬಾನ್​​​​ ಮನಸ್ಥಿತಿಯ ಕಾಂಗ್ರೆಸ್​​​ ಅಧಿಕಾರಿಕ್ಕೆ ಬರಬಾರದು. ರಾಜಸ್ಥಾನ ಸರ್ಕಾರದ ಆಡಳಿತದಿಂದ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದರು.

Ashika S

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

7 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

23 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

47 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

58 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago