News Karnataka Kannada
Sunday, April 28 2024
ರಾಜಸ್ಥಾನ

ಇಂದು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣ ವಚನ

Bhajan Lal Sharma to take oath as Chief Minister of Rajasthan today
Photo Credit : News Kannada

ರಾಜಸ್ಥಾನ: ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಅವರ ಹುಟ್ಟುಹಬ್ಬವಿರುವ ಕಾರಣ ಇಂದೇ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ.

ವಿಧ್ಯಾಧರ್ ನಗರ ಶಾಸಕಿ ದಿಯಾ ಕುಮಾರಿ ಮತ್ತು ದುಡು ಶಾಸಕ ಪ್ರೇಮ್ ಚಂದ್ ಬೈರ್ವಾ ಈ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೈಪುರದ  ಆಲ್ಬರ್ಟ್ ಹಾಲ್‌ನಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮೂವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಪ್ರಮಾಣ ವಚನ ಬೋಧಿಸಲಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರೇಮ್ ಚಂದ್ ಬೈರ್ವಾ ಜೈಪುರದ ಮೋತಿ ಡುಂಗ್ರಿ ಗಣೇಶ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು