ಜೈಪುರ: ರಾಜಸ್ಥಾನದಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಹೊಡೆದಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.
ವ್ಯಾನ್ನಲ್ಲಿದ್ದ 10 ಮಂದಿ ಮಧ್ಯಪ್ರದೇಶದ ಖಿಲ್ಚಿಪುರನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ತೆರಳಿದ್ದರು. ರಾಜಸ್ಥಾನದ ಜಲವಾರ್ ಬಳಿ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್, ವ್ಯಾನ್ಗೆ ಗುದ್ದಿದೆ. ಭೀಕರ ದುರಂತದಲ್ಲಿ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟ್ರಕ್ ಗುದ್ದಿದ ರಭಸಕ್ಕೆ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 6 ಮಂದಿ ಕೊನೆಯುಸಿರೆಳೆದಿದ್ದಾರೆ. ವ್ಯಾನ್ಗೆ ಗುದ್ದಿದ ಟ್ರಕ್ ಚಾಲಕ ಭೀಕರ ಅಪಘಾತದ ಬಳಿಕ ಓಡಿ ಹೋಗಿದ್ದ. ಕೂಡಲೇ ತನಿಖೆ ನಡೆಸಿದ ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.