ಜಲ್ವಾರ್: ಐವರ ಮೇಲೆ ಡಂಪರ್‌ ಟ್ರಕ್‌ ಹರಿಸಿ ಹತ್ಯೆ!

ಜಲ್ವಾರ್ : ಠಾಣೆಗೆ ದೂರು ನೀಡಲು ಹೊರಟ್ಟಿದ್ದ ಐದು ಜನರ ಮೇಲೆ ಡಂಪರ್ ಟ್ರಕ್ ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಮೃತರ ಪೈಕಿ ಇಬ್ಬರು ಸಹೋದರರು ಸೇರಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಡಂಪರ್ ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಡರಾತ್ರಿ ಯಾವುದೋ ವಿಚಾರಕ್ಕೆ ಎರಡು ಗುಂಪಿಗಳ ನಡುವೆ ಜಗಳ ನಡೆದಿದ್ದು, ವಿವಾದಕ್ಕೆ ಕಾರಣ ತಿಳಿದುಬಂದಿಲ್ಲ.

ಇಬ್ಬರು ಸಹೋದರರು ಸೇರಿದಂತೆ ಐವರು ಪೋಲಿಸ್ ಠಾಣೆಗೆ ದೂರು ದಾಖಲಿಸುವುದಾಗಿ ಎರಡು ಮೋಟಾರು ಸೈಕಲ್ ನಲ್ಲಿ ಹೊರಟ್ಟಿದ್ದರು. ಇವರನ್ನು ತಡೆದ ಆರೋಪಿಗಳು ಡಂಪರ್‌ ಟ್ರಕ್​ ನ್ನು ಮೋಟಾರ್ ಸೈಕಲ್ ಮೇಲೆ ಹರಿಸಿ, ಸ್ಥಳದಲ್ಲಿಯೇ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಘಟನೆಯ ನಂತರ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ ಎಂದು ಪಗಾರಿಯಾ ಠಾಣಾಧಿಕಾರಿ ವಿಜಯೇಂದ್ರ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಲ್ ಆಫೀಸರ್ ಪ್ರೇಮ್ ಕುಮಾರ್ ತಿಳಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್‌ಎಚ್‌ಒ ವಿಜೇಂದ್ರ ಸಿಂಗ್ ಹೇಳಿದ್ದಾರೆ.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago