News Karnataka Kannada
Sunday, April 28 2024
ರಾಜಸ್ಥಾನ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೋವಿಡ್‌, ಹಂದಿ ಜ್ವರ ಪಾಸಿಟಿವ್‌

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೋವಿಡ್‌-19 ಹಾಗೂ ಹಂದಿ ಜ್ವರ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಕರಿತು ಅಶೋಕ್‌ ಗೆಹ್ಲೋಟ್‌ ಅವರೇ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Photo Credit : News Kannada

ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕೋವಿಡ್‌-19 ಹಾಗೂ ಹಂದಿ ಜ್ವರ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಕರಿತು ಅಶೋಕ್‌ ಗೆಹ್ಲೋಟ್‌ ಅವರೇ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ವೈದ್ಯರ ಸಲಹೆ ಮೇರೆಗೆ ನಾನು ಪರೀಕ್ಷೆಗೆ ಒಳಗಾಗಿದ್ದು ಕೋವಿಡ್‌-19 ಹಾಗೂ ಹಂದಿಜ್ವರ ಪಾಸಿಟಿವ್‌  ಎಂದು ದೃಢಪಟ್ಟಿದೆ. ಇದರಿಂದಾಗಿ ಮುಂದಿನ ಏಳು ದಿನಗಳವರೆಗೆ ನಾನು ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಬದಲಾದ ಕಾಲಮಾನದಲ್ಲಿ ಪಕ್ಷದ ಮುಖಂಡರೂ ತಮ್ಮ ಆರೋಗ್ಯ ನೋಡಿಕೊಳ್ಳಿ ಎಂದು ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ.

ಮುಂದಿನ ಚಿಕಿತ್ಸೆಗಾಗಿ ಅಶೋಕ್‌ ಗೆಹ್ಲೋಟ್‌ ಅವರನ್ನು ಜೈಪುರದ SMS ಆಸ್ಪತ್ರೆಯ ಐಡಿಎಚ್ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು