ರಾಜಸ್ಥಾನ: ರಾಜಸ್ಥಾನದ ಸಿರೋಹಿಯಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಈ ಪ್ರಕರಣದಲ್ಲಿ ಮುನ್ಸಿಪಲ್ ಕೌನ್ಸಿಲ್ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿರ ವಿರುದ್ಧ ಪಾಲಿ ಜಿಲ್ಲೆಯ ಮಹಿಳೆಯೊಬ್ಬರು ಪೊಲೀಸರನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣದ ತನಿಖೆ ಆರಂಭವಾಗಿದೆ.