ಜೆಇಇ ಆಕಾಂಕ್ಷಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ಜೈಪುರ: 18 ವರ್ಷದ ಜೆಇಇ  ಆಕಾಂಕ್ಷಿ ಪರೀಕ್ಷೆ ಇನ್ನೆರಡು ದಿನಗಳು ಇರುವಾಗಲೇ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನಿಹಾರಿಕ ಎಂದು ಗುರುತಿಸಲಾಗಿದೆ.

ಪೋಷಕರಿಗೆ ಡೆತ್‌ನೋಟ್‌  ಬರೆದಿಟ್ಟು ಕೋಟಾದ ಶಿಕ್ಷಾನಗರಿ ಪ್ರದೇಶದಲ್ಲಿನ ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಮ್ಮಿ-ಪಪ್ಪಾ ನಾನು ಜೆಇಇ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಸೋತಿದ್ದೇನೆ, ಇದಕ್ಕೆ ನಾನೇ ಕಾರಣ. ನಾನು ಕೆಟ್ಟ ಮಗಳು. ನನ್ನಮ್ಮು ಕ್ಷಮಿಸಿ, ಮಮ್ಮಿ-ಪಪ್ಪಾ ಇದು ನನ್ನ ಕೊನೆಯ ಆಯ್ಕೆಯಾಗಿದೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನನಗೆ ಜೆಇಇ ಮಾಡಲು ಸಾಧ್ಯವಾಗುತ್ತಿಲ್ಲ ಎಂದು  ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಕಳೆದ ಒಂದು ವಾರದಲ್ಲಿ ಇದು 2ನೇ ಆತ್ಮಹತ್ಯೆಯ ಪ್ರಕರಣವಾಗಿದೆ.

ಅಷ್ಟೇ ಅಲ್ಲ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳ ಕೋಚಿಂಗ್ ಸಂಸ್ಥೆಗಳಿಗೆ ಹೆಸರುವಾಸಿಯಾಗಿರುವ ಕೋಟಾದಲ್ಲಿ 2023ರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Ashika S

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

6 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago