ರಾಜಸ್ಥಾನ

ರಾಜಸ್ಥಾನ: 12,800 ಕ್ಕೂ ಹೆಚ್ಚು ಗೋವುಗಳ ಜೀವ ತೆಗೆದ ಲಂಪಿ ವೈರಸ್‌ ಚರ್ಮದ ಸೋಂಕು

ರಾಜಸ್ಥಾನ: ರಾಜಸ್ಥಾನದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಲಂಪಿ ವೈರಸ್‌ ಚರ್ಮದ ಸೋಂಕು 12,800 ಕ್ಕೂ ಹೆಚ್ಚು ಗೋವುಗಳ ಜೀವ ತೆಗೆದಿದೆ. ಅಕ್ಕರೆಯಿಂದ ಸಾಕಿ ಬೆಳೆಸಿದ ಮೂಕ ಪ್ರಾಣಿಗಳ ರೋಧನೆ ನೋಡಲಾಗದೆ ರೈತರು ಕಣ್ಣೀರಿಡುತ್ತಿದ್ದಾರೆ.

ಸೋಂಕು ಮತ್ತಷ್ಟು ಹರಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರವು ಪ್ರಾಣಿ ಸಂತೆ ನಡೆಸುವುದನ್ನು ನಿಷೇಧಿಸಿದೆ.
ಶ್ರೀ ಗಂಗಾನಗರದಲ್ಲಿ ಗರಿಷ್ಠ 2,511 ಜಾನುವಾರುಗಳ ಸಾವುಗಳು ವರದಿಯಾಗಿವೆ. ನಂತರ ಬಾರ್ಮರ್‌ನಲ್ಲಿ 1,619, ಜೋಧ್‌ಪುರದಲ್ಲಿ 1,581, ಬಿಕಾನೇರ್‌ನಲ್ಲಿ 1,156, ಜಾಲೋರ್‌ನಲ್ಲಿ 1,150 ಮತ್ತು ಜಾಲೋರ್‌ನಲ್ಲಿ 1,138 ಸಾವುಗಳು ವರದಿಯಾಗಿವೆ.

“ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ರೋಗ ಹರಡುವುದನ್ನು ನಿಯಂತ್ರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಐದು ಜಿಲ್ಲೆಗಳಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಪಿಸಿ ಕಿಶನ್ ತಿಳಿಸಿದ್ದಾರೆ.

ಇಲಾಖೆಯ ಪ್ರಕಾರ, ಒಟ್ಟು 2,81,484 ಪ್ರಾಣಿಗಳು ರೋಗದಿಂದ ಬಾಧಿತವಾಗಿವೆ ಮತ್ತು 2,41,685 ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗಿದೆ. ರಾಜ್ಯದಲ್ಲಿ ರೋಗ ಹರಡುವುದನ್ನು ಪರಿಗಣಿಸಿ, ರಾಜ್ಯ ಸರ್ಕಾರವು ರಾಜಸ್ಥಾನದಲ್ಲಿ ಪ್ರಾಣಿ ಸಂತೆಗಳನ್ನು ಆಯೋಜಿಸುವುದನ್ನು ನಿಷೇಧಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಜಾನುವಾರುಗಳ ಶವ ಸುರಕ್ಷಿತ ವಿಲೇವಾರಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.ಪರಿಸ್ಥಿತಿಯನ್ನು ನಿಭಾಯಿಸುವ ಕ್ರಮಗಳ ಭಾಗವಾಗಿ, ರಾಜಸ್ಥಾನ ಸರ್ಕಾರವು 500 ಹುದ್ದೆಗಳಲ್ಲಿ ತಾತ್ಕಾಲಿಕ ಸಿಬ್ಬಂದಿಯನ್ನು ಶೀಘ್ರವಾಗಿ ನೇಮಿಸಿಕೊಳ್ಳಲು ಅನುಮೋದನೆ ನೀಡಿದೆ.

ಇವರಲ್ಲಿ 200 ಪಶುವೈದ್ಯರು ಮತ್ತು 300 ಜಾನುವಾರು ಸಹಾಯಕರು ಸೇರಿದ್ದಾರೆ. ಪಶುಸಂಗೋಪನಾ ಇಲಾಖೆ ಸಚಿವ ಲಾಲ್ ಚಂದ್ ಕಟಾರಿಯಾ ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

27 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

48 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago