News Karnataka Kannada
Friday, May 03 2024
ರಾಜಸ್ಥಾನ

ಜೈಪುರ: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ ಘಟನೆ ಸಂಭವಿಸಿದೆ.
Photo Credit : Pixabay

ಜೈಪುರ: ಅಪ್ರಾಪ್ತೆಯ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರ ರಾತ್ರಿ ದೌಸಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಇದಾದ ಬಳಿಕ ಆರೋಪಿಗಳಾದ ಲೋಕೇಶ್ ಹಾಗೂ ಸತೀಶ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ತನ್ನ ಶಾಲೆಯ ಸಮೀಪವಿರುವ ಜೆರಾಕ್ಸ್ ಅಂಗಡಿಯಿಂದ ನಕಲು ಪ್ರತಿ ಪಡೆಯಲು ಹೋಗಿದ್ದ ವೇಳೆ ಆರೋಪಿಗಳು ಅಪಹರಿಸಿದ್ದಾರೆ. ಆರೋಪಿಗಳು ಆಕೆಯನ್ನು ಮೋಟಾರ್‌ ಸೈಕಲ್‌ ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ, ಆರೋಪಿಗಳು ಪರಾರಿಯಾಗಿದ್ದಾರೆ. ಬಾಲಕಿ ಸಂಜೆಯಾದರೂ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು.

ಸಂತ್ರಸ್ತೆ ಹೇಗೋ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ನಿಂದ ಆತನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾಳೆ. ಸಂತ್ರಸ್ತೆಯ ದೂರಿನ ಮೇರೆಗೆ ಬುಧವಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು