ಜೈಪುರ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗ3ದ ಘಟನೆ ರಾಜಸ್ಥಾನದ ಕೋಚಿಂಗ್ ಹಬ್ ಕೋಟಾದಲ್ಲಿ ನಡೆದಿದೆ. ಸದ್ಯ ಆರೋಪಿಗಳನ್ನ ಬಂಧಿಸಲಾಗಿದೆ.
ಆರೋಪಿಗಳು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದಲ್ಲಿ ಓರ್ವ ಆರೋಪಿಯ ಪರಿಚಯವಾಗಿತ್ತು ಆತನೆ ಕರೆಸಿಕೊಂಡಿದ್ದ ಎನ್ನಲಾಗಿದೆ.