News Karnataka Kannada
Thursday, May 02 2024
ರಾಜಸ್ಥಾನ

ಪಂಚರಾಜ್ಯ ಚುನಾವಣೆ: ರಾಜಸ್ಥಾನದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಕಾಂಗ್ರೆಸ್  ಸರ್ಕಾರದ ವಿರುದ್ಧ ಎಕ್ಸ್ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ, ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ.
Photo Credit : News Kannada

ಜೈಪುರ: ಭಾರಿ ಕುತೂಹಲ ಕೆರಳಿಸಿರುವ ಪಂಚರಾಜ್ಯ ಚುನಾವಣೆಯಲ್ಲಿ ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಪೈಕಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದೆ.

ಚುನಾವಣಾ ಆಯೋಗದಿಂದ ದೊರೆತ ಮಾಹಿತಿಯ ಪ್ರಕಾರ ಬಿಜೆಪಿಗೆ ಭಾರೀ ಮುನ್ನಡೆ ಕಾಯ್ದುಕೊಂಡಿದೆ ಎಂದು ತಿಳಿದು ಬಂದಿದೆ. 10.20ಕ್ಕೆ ಬಿಜೆಪಿ 99, ಕಾಂಗ್ರೆಸ್‌ 73, ಪಕ್ಷೇತರರು 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಬಿಎಸ್‌ಪಿ 3, ಸಿಪಿಐ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಚಿತ್ರಣ ದೊರೆಯಲಿದ್ದು, ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾವಿನಿಂದ ಕರಣ್‌ಪುರ ಕ್ಷೇತ್ರಕ್ಕೆ ಮತದಾನ ನಡೆದಿಲ್ಲ. ಹಾಗಾಗಿ 199 ಸ್ಥಾನಗಳಿಗೆ ಮಾತ್ರ ಎಣಿಕೆ ನಡೆಯುತ್ತಿದೆ.

ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ರಾಜಸ್ಥಾನದಲ್ಲಿ ನವೆಂಬರ್ 25 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನವಾದ ಮತಗಳ ಎಣಿಕೆ ಇಂದು ರಾಜ್ಯದ 36 ಕೇಂದ್ರಗಳಲ್ಲಿ ನಡೆಯಲಿದೆ. 30 ಚುನಾವಣಾ ಜಿಲ್ಲೆಗಳು ಒಂದು ಎಣಿಕೆ ಕೇಂದ್ರವನ್ನು ಹೊಂದಿದ್ದರೆ, ಜೈಪುರ, ಜೋಧ್‌ಪುರ ಮತ್ತು ನಾಗೌರ್ ತಲಾ ಎರಡು ಕೇಂದ್ರಗಳನ್ನು ಹೊಂದಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು