ರಾಜಸ್ತಾನ| ನೂಪುರ್​ ಶರ್ಮಾ ಬೆಂಬಲಿಗನ ಹತ್ಯೆ: ಒಂದು ತಿಂಗಳು 144 ಸೆಕ್ಷನ್​ ಜಾರಿ

ರಾಜಸ್ತಾನ: ನೂಪುರ್​ ಶರ್ಮಾ ಪರವಾಗಿ ಪೋಸ್ಟ್​ ಹಾಕಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ, ಪ್ರಧಾನಿಗೆ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ನಡುಗಿಸಿದ್ದು, ರಾಜಸ್ಥಾನದಲ್ಲಿ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೀಗ ಒಂದು ತಿಂಗಳವರೆಗೂ 144 ಸೆಕ್ಷನ್​ ಜಾರಿ ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ದಳ(ಎನ್​ಐಎ) ಅಖಾಡಕ್ಕಿಳಿದಿದೆ.
ಎನ್‌ಐಎ ತಂಡ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಉದಯಪುರಕ್ಕೆ ಆಗಮಿಸಿದೆ. ತಕ್ಷಣ ಶಾಂತಿ ನೆಲೆಸಲು ಮತ್ತು ಘಟನೆಯನ್ನು ತೀವ್ರ ತನಿಖೆ ನಡೆಸಲು ಗೃಹ ಸಚಿವಾಲಯ ಸೂಚನೆಯ ಮೇರೆಗೆ ಎನ್​ಐಎ ರಾಜ್ಯಕ್ಕೆ ಆಗಮಿಸಿದೆ.
ಬೆಂಗಳೂರಿನಲ್ಲೂ ಹೈ ಅಲರ್ಟ್:
ನೂಪುರ್ ಶರ್ಮಾ ಬೆಂಬಲಿಸಿದ ರಾಜಸ್ಥಾನದ ಉದಯ್‌ಪುರನ ಕನ್ಹಯ್ಯ ಕುಮಾರ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಖಂಡಿಸಿ ಉದಯ್‌ಪುರದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ನಗರದ ಎಲ್ಲಾ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಸೂಚಿಸಲಾಗಿದೆ.ಬೀಟ್ ಪೊಲೀಸರು ಅಲರ್ಟ್ ಆಗಿರಲು ಸೂಚಿಸಲಾಗಿದೆ.
Sneha Gowda

Recent Posts

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

4 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

20 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

47 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

59 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

1 hour ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago