News Karnataka Kannada
Friday, May 10 2024
ರಾಜಸ್ಥಾನ

ಕೋಟಾದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ಇದು 17ನೇ ಪ್ರಕರಣ

suicide student
Photo Credit : News Kannada

ರಾಜಸ್ಥಾನ: ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಇಂದು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಮಂಜೋತ್ ಛಾಬ್ರಾ ಉತ್ತರ ಪ್ರದೇಶದ ರಾಂಪುರದವನು. ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದು, ಗುರುವಾರ ಬೆಳಗ್ಗೆ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ.

ಕಳೆದ ಕೆಲವು ವರ್ಷಗಳಿಂದ, ಕೋಟಾದಲ್ಲಿ ವಿದ್ಯಾರ್ಥಿಗಳ ಒತ್ತಡ ಮತ್ತು ವೈಫಲ್ಯದ ನಿರಾಶೆಯಿಂದ ಆತ್ಮಹತ್ಯೆ ಮಾಡುತ್ತಿದ್ದಾರೆ. ಕಳೆದ ವರ್ಷ ಕೋಟಾದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು.

ಇನ್ನು ಈ ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು