ರಾಜಸ್ಥಾನ: ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಇಂದು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಮಂಜೋತ್ ಛಾಬ್ರಾ ಉತ್ತರ ಪ್ರದೇಶದ ರಾಂಪುರದವನು. ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಸೆಂಟರ್ಗೆ ದಾಖಲಾಗಿದ್ದು, ಗುರುವಾರ ಬೆಳಗ್ಗೆ ಹಾಸ್ಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದ.
ಕಳೆದ ಕೆಲವು ವರ್ಷಗಳಿಂದ, ಕೋಟಾದಲ್ಲಿ ವಿದ್ಯಾರ್ಥಿಗಳ ಒತ್ತಡ ಮತ್ತು ವೈಫಲ್ಯದ ನಿರಾಶೆಯಿಂದ ಆತ್ಮಹತ್ಯೆ ಮಾಡುತ್ತಿದ್ದಾರೆ. ಕಳೆದ ವರ್ಷ ಕೋಟಾದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು.
ಇನ್ನು ಈ ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…