ಕೋಟಾ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದು ಈ ವರ್ಷ ೮ನೇ ಆತ್ಮಹತ್ಯೆಯಾಗಿದ್ದು, ಎರಡು ದಿನಗಳಲ್ಲಿ ದೇಶದ ಪ್ರಸಿದ್ಧ ಕೋಚಿಂಗ್ ಹಬ್ನಲ್ಲಿ ನಡೆದ ಎರಡನೇ ಘಟನೆಯಾಗಿದೆ. ಮೃತ ಸೌಮ್ಯಾ ಲಕ್ನೋ ನಿವಾಸಿ. ನೀಟ್ ಪರೀಕ್ಷೆಯ ತಯಾರಿಯ ಭಾಗವಾಗಿ ಆಕೆ ಖಾಸಗಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಿದ್ದಳು ಎಂದು ತಿಳಿದು ಬಂಧಿದೆ. ಸದ್ಯ ಆಕೆಯ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಇನ್ನು ಮಾರ್ಚ್ 25 ರಂದು, ನೀಟ್ ಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಉರುಜ್ ಖಾನ್ (20) ಕೋಟಾದಲ್ಲಿನ ತನ್ನ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ, ಆತ ಉತ್ತರ ಪ್ರದೇಶದ ಕನೌಜ್ ಮೂಲದವರಾಗಿದ್ದಾರೆ.