News Karnataka Kannada
Friday, May 03 2024
ರಾಜಸ್ಥಾನ

ಇಂದು ರಾಜಸ್ಥಾನ್‌ ರಾಯಲ್ಸ್ ಪಿಂಕ್‌ ಜೆರ್ಸಿ ಧರಿಸಿ ಕಣಕ್ಕೆ : ಮಹಿಳಾ ಸಬಲೀಕರಣ ಅಭಿಯಾನ

ರಾಜಸ್ಥಾನ್‌ ರಾಯಲ್ಸ್ ತಂಡವು ಇಂದು ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ ಸಬಲೀಕರಣಕ್ಕೆ ನೆರವಾಗುವ ಉದ್ದೇಶವೂ ಇದಾಗಿದೆ. ಈ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.
Photo Credit : NewsKarnataka

ಜೈಪುರ: ರಾಜಸ್ಥಾನ್‌ ರಾಯಲ್ಸ್ ತಂಡವು ಇಂದು ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಪಿಂಕ್‌ ಬಣ್ಣದ ವಿಶೇಷ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ರಾಜಸ್ಥಾನದ ಮಹಿಳೆಯರ ಸಬಲೀಕರಣಕ್ಕೆ ನೆರವಾಗುವ ಉದ್ದೇಶವಾಗಿದ್ದು,   ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

ರಾಜಸ್ಥಾನ್‌ ರಾಯಲ್ಸ್‌ ತಂಡವು ಮಹಿಳಾ ಸಬಲೀಕರಣ ಉದ್ದೇಶದಿಂದ ಈ ಅಭಿಮಾನ ಆರಂಭಿಸಿದೆ. ಅದಕ್ಕಾಗಿ ವಿಶೇಷ ಪಿಂಕ್‌ ಜೆರ್ಸಿ ಧರಿಸಿ ಆರ್‌ಸಿಬಿ ವಿರುದ್ಧ ಕಣಕ್ಕಿಳಿಯಲಿದೆ.

ಈ ಪಂದ್ಯದ ಪ್ರತಿ ಟಿಕೆಟ್‌ ಬೆಲೆಯಲ್ಲಿ 100 ರೂ.ಗಳನ್ನ ಮಹಿಳಾ ಸಬಲೀಕರಣ ಕಾರ್ಯಕ್ಕೆ ಸಮರ್ಪಿಸಲಿದೆ. ಜೊತೆಗೆ ʻಆಲ್ ಪಿಂಕ್ ರಾಯಲ್ಸ್ʼ ಜೆರ್ಸಿ ಮಾರಾಟದ ಮೊತ್ತವನ್ನೂ ಇದಕ್ಕೆ ವಿನಿಯೋಗಿಸಲಿದೆ. ರಾಜಸ್ಥಾನ-ಆರ್‌ಸಿಬಿ ತಂಡಗಳು ಈ ಪಂದ್ಯದಲ್ಲಿ ಸಿಡಿಸುವ ಪ್ರತಿ ಸಿಕ್ಸರ್‌ಗೆ ಜೈಪುರ ಜಿಲ್ಲೆಯ ಸಂಭರ್ ಗ್ರಾಮದ ಪ್ರತಿ 6 ಮನೆಗಳಿಗೆ ಸೌರಶಕ್ತಿಯನ್ನು ಫ್ರಾಂಚೈಸಿ ವತಿಯಿಂದ ಒದಗಿಸಲಾಗುತ್ತದೆ.

ಬಿಸಿಸಿಐ ಸೇರಿದಂತೆ ಹಲವು ಫ್ರಾಂಚೈಸಿಗಳು ಐಪಿಎಲ್‌ ಟೂರ್ನಿಯನ್ನ ಕೇವಲ ಹಣದ ಉದ್ದೇಶಕ್ಕಾಗಿ ನಡೆಸದೇ ವಿಶಿಷ್ಟ ಜಾಗೃತಿ ಅಭಿಯಾನಗಳನ್ನೂ ಹಮ್ಮಿಕೊಳ್ಳಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು