News Karnataka Kannada
Monday, April 15 2024
Cricket
ದೇಶ

ರಕ್ಷಣಾ ಸಚಿವ ರಾಜನಾಥ್ ಸಿಂಗ್​ಗೆ ಜನ್ಮದಿನದ ಸಂಭ್ರಮ

Rajnath Singh Birthday
Photo Credit : Twitter

ರಾಜನಾಥ್ ಸಿಂಗ್ ರಾಜಕೀಯ ಜೀವನದಲ್ಲಿ ಮೇರು ಸಾಧನೆ ಮಾಡಿದ ಅದ್ಭುತ ರಾಜಕಾರಣಿ. ಒಬ್ಬ ಸಾಮಾನ್ಯ ವ್ಯಕ್ತಿ, ಇಂದು ದೇಶ ರಕ್ಷಣಾ ಸಚಿವರಾಗಿ, ಅನೇಕ ರಾಜಕೀಯ ಸವಾಲುಗಳನ್ನು ಎದುರಿಸಿಕೊಂಡು ಬಂದ ನಾಯಕ, ಒಂದು ಕಾಲದಲ್ಲಿ ಇಡೀ ದೇಶದಲ್ಲಿ ಬಿಜೆಪಿ ಬಲ ತುಂಬಿದ ಭಾ.ಜ.ಪ ದ ಜನಪ್ರೀಯ ರಾಷ್ಟ್ರಾಧ್ಯಕ್ಷ, ಇಂದು ಈ ನಾಯಕನಿಗೆ 72ರ ಜನ್ಮದಿನದ ಸಂಭ್ರಮ. ರಾಜನಾಥ್ ಸಿಂಗ್ ಅವರು ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಭಭೌರಾ ಗ್ರಾಮದಲ್ಲಿ 10 ಜುಲೈ 1951 ರಂದು ಜನಿಸಿದರು.

ಇವರ ಹುಟ್ಟು ಹಬ್ಬಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮತ್ತು ಇತರ ಪಕ್ಷಗಳ ನಾಯಕರು ಶುಭಾಶಯ ತಿಳಿಸಿದ್ದಾರೆ. ನಮ್ಮ ಹಿರಿಯ ಕ್ಯಾಬಿನೆಟ್ ಸಹೋದ್ಯೋಗಿ ರಾಜನಾಥಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ರಕ್ಷಣಾ ವಲಯದಲ್ಲಿ ಭಾರತದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ವಿವಿಧ ವಿಷಯಗಳ ಬಗ್ಗೆ ಅವರ ಒಳನೋಟಗಳು ಯಾವಾಗಲೂ ಬಹಳ ಉತ್ತಮವಾಗಿರುತ್ತದೆ. ಅವರು ನಮ್ಮ ರೈತರು ಮತ್ತು ಗ್ರಾಮೀಣ ಪ್ರದೇಶಗಳ ಜೀವನವನ್ನು ಸುಧಾರಿಸುವ ಕೆಲಸವನ್ನು ಕೂಡ ಮಾಡಿದ್ದಾರೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

https://twitter.com/narendramodi/status/1678245872906407936?ref_src=twsrc%5Etfw%7Ctwcamp%5Etweetembed%7Ctwterm%5E1678245872906407936%7Ctwgr%5E184306442a4c317a42519b6b74ac72f434b36b51%7Ctwcon%5Es1_&ref_url=https%3A%2F%2Ftv9kannada.com%2Fnational%2Frajnath-singh-birthday-happy-birthday-to-defense-minister-rajnath-singh-greetings-from-pm-modi-national-news-akp-619665.html

ರಾಜನಾಥ್ ಸಿಂಗ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇದಾದ ನಂತರ 2000ದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರು.  ಇದಾದ ಬಳಿಕ 2003ರಲ್ಲಿ ವಾಜಪೇಯಿ ಸರಕಾರದಲ್ಲಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ರಾಜನಾಥ್ ಸಿಂಗ್ ಕೂಡ ಎರಡು ಬಾರಿ ಪಕ್ಷದ ಅಧ್ಯಕ್ಷರಾಗಿದ್ದರು. 2009ರಲ್ಲಿ, ರಾಜನಾಥ್ ಸಿಂಗ್ ಗಾಜಿಯಾಬಾದ್‌ನಿಂದ ಸಂಸದರಾಗಿ ಆಯ್ಕೆಯಾದರು. ಇದಾದ ಬಳಿಕ 2014ರಲ್ಲಿ ಲಕ್ನೋದಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು.  ಮೋದಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು