ನವದೆಹಲಿ: ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಇಂದು ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೂ ಈ ವೇಳೆ ರಾಜನಾಥ್ ಜೊತೆಗೂಡಿದ್ದರು. ಸಿಯಾಚಿನ್ನಲ್ಲಿ ಭಾರತೀಯ ಸೇನೆ ನಿಯೋಜಿಸಿ 40 ವರ್ಷಗಳು ತುಂಬಿ ಕೆಲವೇ ದಿನಗಳು ಕಳೆದಿದ್ದು, ಈ ಸಂದರ್ಭದಲ್ಲಿ ರಾಜನಾಥ ಸಿಂಗ್ ಅಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಲ್ಲಿ ನಿಯೋಜನೆಗೊಂಡ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.
ಕಾರಾಕೋರಂ ಪರ್ವತ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ನೀರ್ಗಲ್ಲಿನಲ್ಲಿ 1984ರ ಏಪ್ರಿಲ್ನಲ್ಲಿ ‘ಆಪರೇಷನ್ ಮೇಘದೂತ್’ ಸೇನಾ ಕಾರ್ಯಾಚರಣೆಯ ಭಾಗವಾಗಿ ಸೇನೆಯನ್ನು ನಿಯೋಜಿಸಲಾಗಿತ್ತು.
Visited a forward post in Siachen. Had a wonderful interaction with the brave Army personnel who are guarding our nation in extremely challenging conditions.
I laud their courage and professionalism, in the line of duty. pic.twitter.com/C5QVo7v2aP
— Rajnath Singh (मोदी का परिवार) (@rajnathsingh) April 22, 2024