News Karnataka Kannada
Tuesday, May 07 2024
ದೇಶ

ರಾಮಜನ್ಮಭೂಮಿ: ನೀಲಿಮಿಶ್ರಿತ ಶ್ವೇತಶಿಲೆಯ ರಾಮನ ವಿಗ್ರಹ ಪ್ರತಿಷ್ಠಾಪಿಸಲು ನಿರ್ಣಯ

Ayodya
Photo Credit : News Kannada

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಂಮದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ .

ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್ , ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮೊದಲಾದವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ‌

ನಿರ್ಮಾಣವೆಚ್ಚ ಹೆಚ್ಚಳ ; ದೇಣಿಗೆಯೂ ಭರಪೂರ !!

ಆರಂಭದಲ್ಲಿ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು . ಆದರೆ ಜಿಎಸ್ ಟಿ ವೆಚ್ಚ , ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1300 ಕೋಟಿ ತಗಲಬಹುದೆಂದು ಅಂದಾಜಿಸಲಾಗಿದೆ . ಆದರೆ ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಭರಪೂರ ಹರಿದು ಬರುತ್ತಿದೆ .‌ತಿಂಗಳೊಂದರ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿಗೂ ಮೀರಿದೆ . ಆದ್ದರಿಂದ ಈ ತನಕದ ಸುಮಾರು 300 ಕೋಟಿ ಖರ್ಚನ್ನು ಈಗ ಹರಿದು ಬರುತ್ತಿರುವ ಹೆಚ್ಚುವರಿ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದೂ ಸಭೆಗೆ ತಿಳಿಸಲಾಯಿತು . ಆದ್ದರಿಂದ ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ‌ ಸಾವಿರ ಕೋಟಿಗೂ ಮೀರಿದ ಮೂಲಧನದ ಸಮ್ಯಕ್ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು .

ಮಹಾರಾಷ್ಟ್ರ ದಿಂದ ಸಾಗುವಾನಿ ಮರ :

ಮಂದಿರಕ್ಕೆ ಬೇಕಾಗುಗ ಸಾಗುವಾನಿ ಮರವನ್ನು ಮಹಾರಾಷ್ಟ್ರದಿಂದ ತರಿಸಿಕೊಳ್ಳಲಾಗುವುದು .ಈ ಖರ್ಚು ವೆಚ್ಚಗಳ ವಿವರಗಳನ್ನು ಸಭೆಗೆ ಸಲ್ಲಿಸಿ ಅನುಮೋದನೆ ಪಡೆಯಲಾಯಿತು .

ಕರ್ನಾಟಕದ ಭಕ್ತರಿಂದ ಸ್ವರ್ಣ ಶಿಖರ : ಭಕ್ತರ ಬೇಡಿಕೆ ಮಂಡಿಸಿದ ಪೇಜಾವರ ಶ್ರೀ

ಕೋಟ್ಯಂತರ ಹಿಂದುಗಳ ಶತಶತಮಾನಗಳ ಕನಸು ಸಾಕಾರಗೊಂಡು ನಿರ್ಮಾಣವಾಗುತ್ತಿರುವ ಭವ್ಯರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ ಇಂಗಿತವನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು

ಮಂದಿರದ ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಸ್ವರ್ಣ ಶಿಖರವನ್ನು ರಾಜ್ಯದ ಭಕ್ತರ ಸಹಕಾರದಿಂದ ನಿರ್ಮಿಸಿ ವಿಶ್ಚ ಹಿಂದು ಪರಿಷತ್ ನೇತೃತ್ವದಲ್ಲಿ ಕರ್ನಾಟಕದ ಹಂಪೆಯಿಂದ ಸ್ವರ್ಣ ಶಿಖರ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಿ ಅಯೋಧ್ಯೆಗೆ ತಲುಪಿಸುವ ಇರಾದೆಯನ್ನು ಭಕ್ತರು ಹೊಂದಿರುವುದನ್ನು ಶ್ರೀಗಳು ತಿಳಿಸಿದರು .

ಅದರ ಜೊತೆಗೆ ಮುಂದಿನ ವರ್ಷಾಂತ್ಯಕ್ಕೆ ನಡೆಯುವ ನೂತನ ಮಂದಿರ ಸಮರ್ಪಣೆ ಹಾಗೂ ಶ್ರೀರಾಮನ ಪ್ರತಿಷ್ಠಾ ಮಹೋತ್ಸವಕ್ಕೆ ದಿನಾಂಕ ನಿಗದಿ ಪಡಿಸಿದ ಬಳಿಕ ದೇಶದ ಭಕ್ತರನ್ನು ಈ ಉತ್ಸವಕ್ಕೆ ಆಹ್ವಾನಿಸುವ ಸಲುವಾಗಿಯೂ ಒಂದು ಯಾತ್ರೆಯನ್ನು ಕೈಗೊಳ್ಳಬಹುದೆಂಬ ಅಬಿಪ್ರಾಯವನ್ನೂ ಶ್ರೀಗಳು ವ್ಯಕ್ತಪಡಿಸಿದರು .

ಟ್ರಸ್ಟ್ ಅಧ್ಯಕ್ಷ ಮಹಾಂತ ಗೋಪಾಲ್ ದಾಸ್ , ಕಾರ್ಯದರ್ಶಿ ಚಂಪತ್ ರಾಯ್ ಕೋಶಾಧಿಕಾರಿ ಗೋವಿಂದ ಗಿರಿ ಮಹಾರಾಜ್.
ಸದಸ್ಯರುಗಳಾದ ಪೇಜಾವರ ಶ್ರೀ ಹಾಗೂ ಇತರೆ ವಿಶ್ವಸ್ಥರು ,ಗೋರಖಪುರ ಜಿಲಾಧಿಕಾರಿ , ವಿಹುಂಪ ಮುಖಂಡ ಗೋಪಾಲ್ ಜಿ , ಮಂದಿರ ನಿರ್ಮಾಣದ ಇಂಜಿನಿಯರ್ , ವಾಸ್ತು ತಜ್ಞರು ,ಉಪಸ್ಥಿತರಿದ್ದರು . ಮತ್ತೋರ್ವ ವಿಶ್ವಸ್ಥರಾದ ಹಿರಿಯ ನ್ಯಾಯವಾದಿ ಪರಾಶರನ್ ಆನ್ ಲೈನ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು .

ಹೈದ್ರಾಬಾದ್ ನಲ್ಲಿ ನಡೆಸಿದ ತಮ್ಮ 35 ಚಾತುರ್ಮಾಸ್ಯ ವ್ರತವನ್ನು ಮುಗಿಸಿ ಸೀಮೋಲ್ಲಂಘನವೋ ಎಂಬಂತೆ ಭಾನುವಾರ ಬೆಳಿಗ್ಗೆ ಅಯೋಧ್ಯೆ ತಲುಪಿದ ಪೇಜಾವರ ಶ್ರೀಗಳು ಬೆಳಿಗ್ಗೆ ಶ್ರೀರಾಮನ ತಾತ್ಕಾಲಿಕ ಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಪೂಜೆ ಸಲ್ಲಿಸಿದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು