Categories: ದೇಶ

ರಾಮ ಮಂದಿರ ಹೆಸರಲ್ಲಿ ಹಣ ಲೂಟಿ: ಕ್ಯೂಆರ್ ಕೋಡ್ ಹಗರಣ ಬಯಲಿಗೆ

ಅಯೋಧ್ಯಾ: ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಬಹು ನಿರೀಕ್ಷಿತ ಭವ್ಯ ರಾಮಮಂದಿರದ ಅದ್ದೂರಿ ಉದ್ಘಾಟನೆ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ರಾಮಮಂದಿರ ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ವಂಚನೆಯ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ.

ದೇವಾಲಯದ ಹೆಸರಿನಲ್ಲಿ ಸೈಬರ್ ಕ್ರಿಮಿನಲ್‌ಗಳು ದೇಣಿಗೆ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ಈ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಎಚ್ಚರಿಕೆ ನೀಡಿದೆ. ಈ ಸಂದೇಶಗಳಲ್ಲಿ ಕ್ಯೂಆರ್ ಕೋಡ್ ಕೂಡ ಇರುತ್ತದೆ. ಇದನ್ನು ಸ್ಕ್ಯಾನ್ ಮಾಡಿ ಹಣ ಪಾವತಿಸಿದರೆ ಅದು ವಂಚಕರ ಖಾತೆಗೆ ಸೇರುತ್ತದೆ ಎಂದು ತಿಳಿಸಿದೆ.

ಈ ಬಗ್ಗೆ ವಿಎಚ್‌ಪಿ ವಕ್ತಾರ ವಿನೋಬ್ ಬನ್ಸಾಲ್ ಅವರು ಗೃಹ ಸಚಿವಾಲಯ ಮತ್ತು ಉತ್ತರ ಪ್ರದೇಶ ಹಾಗೂ ದಿಲ್ಲಿ ಪೊಲೀಸ್ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಂದಿರ ನಿರ್ಮಾಣವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹೊರತಾಗಿ ದೇಣಿಗೆ ಸಂಗ್ರಹಿಸಲು ಯಾರಿಗೂ ಅಧಿಕಾರವಿಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

“ದೇವಸ್ಥಾನದ ಹೆಸರಿನಲ್ಲಿ ಹಣ ಸಂಗ್ರಹಿಸುವ ಕೊಳಕು ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ನನಗೆ ಇತ್ತೀಚೆಗೆ ಮಾಹಿತಿ ಬಂದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್, ದೇಣಿಗೆ ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಾನು ಗೃಹ ಸಚಿವಾಲಯ, ಉತ್ತರ ಪ್ರದೇಶ ಡಿಜಿಪಿ ಮತ್ತು ದಿಲ್ಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಜನರು ಅಂತಹ ವಂಚನೆಯ ಜಾಲದೊಳಗೆ ಬೀಳದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಜನರು ಕೂಡ ಎಚ್ಚರಿಕೆಯಿಂದ ಇರುವುದು ಅಗತ್ಯ. ಇದು ಸಂಭ್ರಮಾಚರಣೆಯ ಸಂದರ್ಭ. ನಾವು ಆಹ್ವಾನ ಪತ್ರಿಕೆಗಳನ್ನು ಕಳುಹಿಸುತ್ತಿದ್ದೇವೆ. ನಾವು ಯಾವುದೇ ದೇಣಿಗೆಗಳನ್ನು ಸಂಗ್ರಹಿಸುತ್ತಿಲ್ಲ ಎಂದು ಬನ್ಸಾಲ್ ಅವರು ವಿಡಿಯೋದಲ್ಲಿ ಹೇಳಿದ್ದಾರೆ.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago