News Karnataka Kannada
Monday, May 06 2024
ದೇಶ

ಮತದಾರರಿಗೆ ‘ರ‍್ಯಾಪಿಡೋ’ ಉಚಿತ ಪ್ರಯಾಣದ ಆಫರ್

Rapi
Photo Credit : NewsKarnataka

ಬೆಂಗಳೂರು: “ಸವಾರಿಜಿಮ್ಮದರಿಕಿ” ಉಪಕ್ರಮದ ಭಾಗವಾಗಿ ರಾಜ್ಯದ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಬೈಕ್ , ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ಗಳಲ್ಲಿ ತೆರಳುವ ಅವಕಾಶ ಮಾಡಿಕೊಡಲಾಗುವುದು ಎಂದು ‘ರ‍್ಯಾಪಿಡೋ’ ಬುಧವಾರ ಹೇಳಿದೆ.

ಬೆಂಗಳೂರು, ಮೈಸೂರು ಮತ್ತು ಮಂಗಳೂರಿನ ಮತದಾರರು ಏಪ್ರಿಲ್ 26 ರಂದು VOTENOW’ ಕೋಡ್ ಬಳಸಿಕೊಂಡು ಮತಗಟ್ಟೆಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

“ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ 2024 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬೆಂಗಳೂರಿನಲ್ಲಿರುವ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ‘ರ‍್ಯಾಪಿಡೋ ಹೇಳಿಕೆಯಲ್ಲಿ ತಿಳಿಸಿದೆ.

ವಿಶೇಷ ಚೇತನರು ಮತ್ತು ಹಿರಿಯ ನಾಗರಿಕ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸಲು ಸಮಾನ ಅವಕಾಶ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ‘ರ‍್ಯಾಪಿಡೋ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ ಹೇಳಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು