Categories: ದೇಶ

ಇಂದಿನಿಂದ ಆರ್​ಬಿಐ ಎಂಪಿಸಿ ಸಭೆ: ರೆಪೋ ದರ ಏರಿಕೆಯಾಗುವ ಸಾಧ್ಯತೆ ?

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಇಂದು ಮಂಗಳವಾರ ಆರಂಭವಾಗುತ್ತಿದೆ. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ದೇಶದ ಸದ್ಯದ ಹಣಕಾಸು ಪರಿಸ್ಥಿತಿ, ಭವಿಷ್ಯದ ಸ್ಥಿತಿ ಇತ್ಯಾದಿಯನ್ನು ಸಮಗ್ರವಾಗಿ ಅವಲೋಕಿಸಲಾಗುತ್ತದೆ. ಆರ್ಥಿಕ ಬೆಳವಣಿಗೆಗೆ ಪೂರಕವಾಗುವ ಹಣಕಾಸು ಕ್ರಮಗಳು, ಹಣದುಬ್ಬರ ಇಳಿಕೆಗೆ ತೆಗೆದುಕೊಳ್ಳಬಹುದಾದ ಕ್ರಮಗಳು ಇತ್ಯಾದಿಯನ್ನು ಚರ್ಚಿಸಲಾಗುತ್ತದೆ.

ಹಿಂದಿನ ಎರಡು ಸಭೆಗಳಲ್ಲಿ ಬಡ್ಡಿದರ ಏರಿಸದೇ ಇರುವ ಆರ್​ಬಿಐ ಈ ಬಾರಿಯೂ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ. ಆರ್​ಬಿಐನ ರೆಪೋ ದರ ಅಥವಾ ಬಡ್ಡಿ ದರ ಶೇ. 6.50ರಷ್ಟಿದೆ. ಇದೇ ದರ ಮುಂದಿನ 2 ತಿಂಗಳು ಮುಂದುವರಿಯಬಹುದು.

ಹಣದುಬ್ಬರಕ್ಕೆ ಕಡಿವಾಣ ಹಾಕಲು ಕಳೆದ ಒಂದು ವರ್ಷದಿಂದ ಆರ್​ಬಿಐ ಬಡ್ಡಿದರ ಏರಿಸುತ್ತಾ ಬಂದಿದೆ. ಶೇ. 7ರ ಮೇಲಿದ್ದ ಹಣದುಬ್ಬರ ಶೇ. 6ರ ಒಳಗೆ ಬಂದಿದೆ. ಆದರೆ, ಈಗ ಆಹಾರ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ ಹಣದುಬ್ಬರ ಶೇ. 6ರ ಮಿತಿ ಮೀರಿ ಹೋಗುವ ಸಾಧ್ಯತೆ ಇದೆ.

ಆದರೆ, ಬಡ್ಡಿದರ ಏರಿಕೆ ಮಾಡಿದರೆ ಅದರ ಸೈಡ್ ಎಫೆಕ್ಟ್ ಆಗಿ ಆರ್ಥಿಕತೆಗೆ ಘಾಸಿಯಾಗುತ್ತದೆ. ಹೀಗಾಗಿ, ಹಣದುಬ್ಬರವನ್ನು ಏಕೈಕ ಮಾನದಂಡವನ್ನಾಗಿ ಇಟ್ಟುಕೊಂಡು ರೆಪೋ ದರ ನಿರ್ಧರಿಸುವ ಸ್ಥಿತಿಯಲ್ಲಿ ಆರ್​ಬಿಐ ಇಲ್ಲ ಎಂದು ವರದಿಯಾಗಿದೆ.

ಒಂದು ವೇಳೆ ಆಗಸ್ಟ್ 10ರಂದು ಆರ್​ಬಿಐ ಬಡ್ಡಿದರ ಹೆಚ್ಚಿಸಿದರೆ ಷೇರುಪೇಟೆಯಲ್ಲಿ ಬಹಳಷ್ಟು ವ್ಯತ್ಯಯವಾಗುವ ಸಾಧ್ಯತೆ ಇದೆ.

ಇನ್ನು ಇಂದು ನಡೆಯಲಿರುವ ಎಂಪಿಸಿ ಸಭೆಯಲ್ಲಿನ ಪ್ರಮುಖ ನಿರ್ಧಾರಗಳನ್ನು ಆಗಸ್ಟ್ 10ರಂದು ಆರ್‍ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆಗಸ್ಟ್ 10ರದು ಸುದ್ದಿಗೋಷ್ಠಿಯಲ್ಲಿ ತಿಳಿಸಲಿದ್ದಾರೆ. ಜತೆಗೆ ಮತ್ತೆ ಬಡ್ಡಿದವನ್ನು ರಿಸರ್ವ್ ಬ್ಯಾಂಕ್ ಏರಿಸುತ್ತ ಎಂಬುದನ್ನು ಕಾದು ನೋಡನಬೇಕಿದೆ.

 

Ashitha S

Recent Posts

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

15 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

36 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

54 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

2 hours ago