ದೇಶ

ಬ್ರಿಟಿಷರಿಂದಲೇ ರಾಷ್ಟ್ರಗೀತೆ ನುಡಿಸಿದ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್

ಲಂಡನ್: ಗ್ರ್ಯಾಮಿ ಪುರಸ್ಕ್ರತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್​, 77 ನೇ ಸ್ವಾತಂತ್ರ್ಯ ದಿನದಂದು ಬ್ರಿಟಿಷರ ನಾಡಲ್ಲಿ ಬ್ರಿಟಿಷರಿಂದಲೇ ರಾಷ್ಟ್ರಗೀತೆ ನುಡಿಸುವಂತೆ ಮಾಡಿದ್ದಾರೆ. ರಾಷ್ಟ್ರಗೀತೆಯ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್​ ಟಚ್​ ಕೊಟ್ಟಿದ್ದಾರೆ.

ಭಾರತ ದೇಶವನ್ನಾಳಿದ ಬ್ರಿಟಿಷರ ನಾಡು ಲಂಡನ್​ನಲ್ಲಿಯೇ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಿದ್ದಾರೆ. ಇಲ್ಲಿ ವಿಶೇಷವೆಂದರೆ, ಬ್ರಿಟಿಷರೇ ರಾಷ್ಟ್ರಗೀತೆಗೆ ಸಂಗೀತದ ಉಪಕರಣಗಳನ್ನು ನುಡಿಸಿದ್ದಾರೆ. ಕೇವಲ ಮೂರು ಗಂಟೆಯಲ್ಲಿ 100 ಮಂದಿ ಮ್ಯೂಸಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ದವಾಗಿದೆ.

ಈ ಬಗ್ಗೆ ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.

 

Ashitha S

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

17 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

34 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

45 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago