ಶಿಲ್ಲಾಂಗ್: ಮೇಘಾಲಯ ಪೊಲೀಸರು ಭಾನುವಾರ 15 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟಗಾರನನ್ನು ಬಂಧಿಸಲಾಗಿದ್ದು, ಆತನಿಂದ 10.16 ಕೆಜಿ ಕ್ರಿಸ್ಟಲ್ ಮೆಥ್ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶನಿವಾರವೂ ಕೂಡ ಪೊಲೀಸರು 6 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದರು.
ಡ್ರಗ್ಸ್ ಹಾವಳಿಯನ್ನು ತೊಡೆದುಹಾಕುವುದು ನಮ್ಮ ಉದ್ದೇಶವಾಗಿದೆ. ಎಲ್ಲರೂ ಒಗ್ಗೂಡಿ ಡ್ರಗ್ಸ್ ಮುಕ್ತ ಮೇಘಾಲಯವನ್ನು ನಿರ್ಮಿಸಲು ಪ್ರತಿಜ್ಞೆ ಮಾಡೋಣ” ಎಂದು ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಎಕ್ಸ್ ಗೆ ಪ್ರತಿಕ್ರಿಯಿಸಿರುವ ಮೇಘಾಲಯ ಪೊಲೀಸ್ ಮಹಾನಿರ್ದೇಶಕ ಎಲ್.ಆರ್. ಬಿಷ್ಣೋಯ್ ಪೊಲೀಸರು ಡ್ರಗ್ಸ್ ಮುಕ್ತ ಮೇಘಾಲಯ ನಿರ್ಮಿಸಲು ಕಟಿಬದ್ಧರಾಗಿದ್ದಾರೆ ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ.