ದೇಶ

ವಂಚನೆಯಿಂದಾಗಿ ರಷ್ಯಾ ಸೇನೆ ಸೇರಿದ್ದ ಭಾರತೀಯರ ಬಿಡುಗಡೆ: ಕೇಂದ್ರ

ನವದೆಹಲಿ: ಮಧ್ಯವರ್ತಿಗಳ ವಂಚನೆಯಿಂದಾಗಿ ರಷ್ಯಾಕ್ಕೆ ತೆರಳಿ ಬಲವಂತವಾಗಿ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ದೂಡಲ್ಪಟ್ಟಿದ್ದ ಹಲವು ಭಾರತೀಯರನ್ನು ರಷ್ಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ಭಾರತ ಸರ್ಕಾರ ಹೇಳಿದೆ. ಕರ್ನಾಟಕದ ಮೂವರು ಸೇರಿದಂತೆ 60ಕ್ಕೂ ಹೆಚ್ಚು ಭಾರತೀಯರು ರಷ್ಯಾದಲ್ಲಿ ವಂಚನೆಗೊಳಗಾಗಿರುವ ವಿಷಯ ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರ ಈ ಆಶಾದಾಯಕ ಸುದ್ದಿ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ, ‘ಕೆಲ ಭಾರತೀಯರು ರಷ್ಯಾ ಸೇನೆಯಿಂದ ಮುಕ್ತಿಗೊಳಿಸುವಂತೆ ಬೇಡಿಕೆ ಇಟ್ಟಿರುವ ಪ್ರಕರಣಗಳ ಕುರಿತು ಮಾಧ್ಯಮಗಳಲ್ಲಿ ನಾವು ನಿರ್ದಿಷ್ಟವಲ್ಲದ ವರದಿಗಳನ್ನು ಗಮನಿಸಿದ್ದೇವೆ. ಇಂಥ ಪ್ರತಿ ಪ್ರಕರಣಗಳನ್ನೂ ನಾವು ಮಾಸ್ಕೋದಲ್ಲಿರುವ ಭಾರತೀಯ ದೂತಾವಾಸ ಕಚೇರಿ ಗಮನಕ್ಕೆ ಮತ್ತು ಭಾರತದಲ್ಲಿನ ರಷ್ಯಾ ದೂತಾವಾಸ ಕಚೇರಿಗೆ ಗಮನಕ್ಕೆ ತಂದಿದ್ದೇವೆ.

ಈ ಪೈಕಿ ಈಗಾಗಲೇ ಹಲವು ಭಾರತೀಯರನ್ನು ಭಾರತೀಯ ಸರ್ಕಾರದ ಕೋರಿಕೆಗೆ ಮೇರೆಗೆ ರಷ್ಯಾ ಬಿಡುಗಡೆ ಮಾಡಿದೆ. ರಷ್ಯಾದಲ್ಲಿ ಸಿಕ್ಕಿಬಿದ್ದಿರುವ ಪ್ರತಿ ಭಾರತೀಯರ ಬಿಡುಗಡೆ ನಮ್ಮ ಆದ್ಯತೆಯಾಗಿರಲಿದೆ. ಇದೇ ವೇಳೆ ಉಕ್ರೇನ್‌ನ ಸಂಘರ್ಷಮಯ ಪ್ರದೇಶದಿಂದ ದೂರ ಇರುವಂತೆ ನಾವು ಇದೇ ವೇಳೆ ಎಲ್ಲಾ ಭಾರತೀಯರಿಗೂ ಕೋರಿಕೆ ಸಲ್ಲಿಸುತ್ತೇವೆ ಎಂದು ಹೇಳಿದೆ.

 

Ashitha S

Recent Posts

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

22 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

50 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

1 hour ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago