ಮುಂಬಯಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಜ.22ರಂದು ನಡೆಯಲಿದೆ. ಹಲವಾರು ಗಣ್ಯರಿಗೆ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ನೀಡಲಾಗುತ್ತಿದೆ. ಇದೀಗ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ, ಭಾರತ ರತ್ನ ಸಚಿನ್ ತೆಂಡೂಲ್ಕರ್ ಅವರಿಗೂ ಆಹ್ವಾನವನ್ನು ನೀಡಲಾಗಿದೆ.
ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಹ್ವಾನ ಸ್ವೀಕರಿಸಿದ ಸಚಿನ್ ಕೂಡ ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.