News Karnataka Kannada
Sunday, April 28 2024
ದೇಶ

ಮೃತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ತಾಯಿ ಗರ್ಭಿಣಿ ಅಲ್ಲ !

Musewala
Photo Credit : News Kannada

ಪಂಜಾಬ್:‌  2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಗರ್ಭಿಣಿಯಲ್ಲ ಅದೊಂದು ವದಂತಿಯಷ್ಟೇ ಎಂಬುದು ತಿಳಿದುಬಂದಿದೆ. ಈ ಕುರಿತು ಅವರ ತಂದೆಯೇ ಸ್ಪಷ್ಟನೆ ನೀಡಿದ್ದಾರೆ. ಸಿಧು ಮೂಸೆವಾಲಾ ಅವರ ಪೋಷಕರು ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ದಿನಗಳಲ್ಲಿ, ದಿವಂಗತ ಗಾಯಕನ ತಂದೆ ಇದೀಗ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಬರೆದಿದ್ದಾರೆ.

ಸಿಧು ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ, ನಮ್ಮ ಕುಟುಂಬದ ಬಗ್ಗೆ ಹಲವು ವದಂತಿಗಳನ್ನು ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

2022 ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಮಾನ್ಸಾದಿಂದ ಸ್ಪರ್ಧಿಸಿದ್ದ ಸಿಧು ಮೂಸೆವಾಲಾ ಅದೇ ವರ್ಷ ಮೇ 29 ರಂದು ದುರಂತವಾಗಿ ಹತ್ಯೆಯಾಗಿದ್ದರು. ಮೇ 29, 2022 ರಂದು, ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಅವರ ಕಾರಿನಲ್ಲಿ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ನೀಡುವ ಮುನ್ನವೇ ಮೃತಪಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು