ಸಿಕ್ಕಿಂ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಪ್ರವಾಹ ಉಂಟಾಗಿ 10 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 22 ಸೇನಾ ಸಿಬ್ಬಂದಿ ಸೇರಿದಂತೆ 82 ಜನರು ಕಣ್ಮರೆಯಾಗಿದ್ದಾರೆ. ಇನ್ನು 14 ಸೇತುವೆಗಳು ಗಳು ಕುಸಿದಿವೆ ಮತ್ತು 3,000ಕ್ಕೂ ಹೆಚ್ಚು ಪ್ರವಾಸಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಆತಂಕವಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ. ಈ ಪರಿಣಾಮ 23 ಸೇನಾ ಸಿಬ್ಬಂದಿ ಕಾಣೆಯಾಗಿದ್ದರು. ಸಧ್ಯ ನಾಪತ್ತೆಯಾದವರ ಪೈಕಿ ಓರ್ವ ಸೈನಿಕರನನ್ನ ರಕ್ಷಿಸಲಾಗಿದೆ.