Categories: ಸಿಕ್ಕಿಂ

ಜಾತ್ರಾ ಮೇಳದಲ್ಲಿ ಭೀಕರ ಅಪಘಾತ: 3 ಸಾವು, 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಿಕ್ಕಿಂ: ಸಿಕ್ಕಿಂ ರಾಜಧಾನಿ ಗ್ಯಾಂಗ್‌ಟಾಕ್‌ನಿಂದ ಸುಮಾರು 11 ಕಿಮೀ ದೂರದಲ್ಲಿರುವ ರಾನ್‌ಪುಲ್‌ನಲ್ಲಿ ಜಾತ್ರಾ ಮೇಳ ನಡೆಯುವಾಗ ಭೀಕರ ಅಪಘಾತ ಸಂಭವಿಸಿದೆ.

ಸಾರ್ವಜನಿಕ ಮೈದಾನದೊಳಗೆ ನಿಯಂತ್ರಣ ತಪ್ಪಿದ ಹಾಲು ಒಕ್ಕೂಟದ ಟ್ಯಾಂಕರ್ ನುಗ್ಗಿ ಮೂವರು ಸಾವನ್ನಪ್ಪಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಾತ್ರಿ 7.12 ಸುಮಾರಿಗೆ ನಡೆದ ಈ ಘಟನೆಯಲ್ಲಿ ನಿಂತಿದ್ದ ವಾಹನಗಳು, ಅಂಗಡಿಗಳು ಸೇರಿದಂತೆ ಆಸ್ತಿಪಾಸ್ತಿಗೆ ಭಾರೀ ಹಾನಿಯಾಗಿದೆ.

ಅಫಘಾತವಾಗ್ತಿದ್ದಂತೆ ತಕ್ಷಣವೇ ಗಾಯಾಳುಗಳ ರಕ್ಷಣೆಗೆ ಸ್ಥಳದಲ್ಲಿದ್ದವರು ಧಾವಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ಯಾಂಕರ್  ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರೋ ರಾಣಿಪುಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ashika S

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

7 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

25 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

46 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago