Categories: ಸಿಕ್ಕಿಂ

ಮೇಘ ಸ್ಫೋಟಕ್ಕೆ ನಲುಗಿದ ಸಿಕ್ಕಿಂ: ತೀಸ್ತಾ ನದಿಯಲ್ಲಿ 27 ಮೃತದೇಹ ಪತ್ತೆ

ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ಪ್ರವಾಹಕ್ಕೆ ಸಿಲುಕಿ 40ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ನಾಪತ್ತೆಯಾಗಿದ್ದ 23 ಸೈನಿಕರಲ್ಲಿ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು ಒಬ್ಬರನ್ನು ರಕ್ಷಿಸಲಾಗಿದೆ. ತೀಸ್ತಾ ನದಿಯಲ್ಲಿ ಈವರೆಗೆ 27 ಮೃತದೇಹ ಪತ್ತೆಯಾಗಿದೆ ಎಂದು ಸಿಕ್ಕಿಂ ಸರ್ಕಾರ ಹೇಳಿದೆ.

ಇನ್ನು ಇಲ್ಲಿಯವರೆಗೆ 2,411 ಸಂತ್ರಸ್ತರನ್ನ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ವಿಕೋಪದಿಂದ ಸುಮಾರು 22 ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಸಿಕ್ಕಿಂ ಪ್ರವಾಹದಲ್ಲಿ ಸೇನೆಯ ಮದ್ದುಗುಂಡುಗಳು ನದಿ ದಡದಲ್ಲಿ ಸ್ಫೋಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ದಿಢೀರ್ ಪ್ರವಾಹದಲ್ಲಿ ಮದ್ದುಗುಂಡುಗಳು ಕೊಚ್ಚಿ ಹೋಗಿವೆ. ಈ ಸ್ಫೋಟದಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

ಇನ್ನು “ಲಾಚೆನ್ ಹಾಗೂ ಲಾಚುಂಗ್ನಲ್ಲಿ ಸುಮಾರು 3 ಸಾವಿರ ಜನರು ಸಿಲುಕಿಕೊಂಡಿದ್ದಾರೆ. ಅದೇ ಪ್ರದೇಶದಲ್ಲಿ ಮೋಟಾರು ಸೈಕಲ್ನಲ್ಲಿ ಸಾಗುತ್ತಿದ್ದ 3,150 ಮಂದಿ ಕೂಡ ಸಿಲುಕಿಕೊಂಡಿದ್ದಾರೆ. ನಾವು ಎಲ್ಲರನ್ನೂ ಸೇನೆ ಹಾಗೂ ವಾಯು ಪಡೆ ಹೆಲಿಕಾಪ್ಟರ್ ಮೂಲಕ ತೆರವುಗೊಳಿಸುತ್ತಿದ್ದೇವೆ” ಎಂದು ಸಿಕ್ಕಿಂನ ಮುಖ್ಯ ಕಾರ್ಯದರ್ಶಿ ವಿಜಯ್ ಭೂಷಣ್ ಪಾಠಕ್ ತಿಳಿಸಿದ್ದಾರೆ. ಇದರ ಜೊತೆ ಇನ್ನೊಂದು ಹಿಮನದಿ ಸ್ಫೋಟಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯಕ್ಕೆ ತಮ್ಮ ಪ್ರವಾಸವನ್ನು ವಿಳಂಬಿಸುವಂತೆ ಆಡಳಿತ ಪ್ರವಾಸಿಗಳನ್ನು ಆಗ್ರಹಿಸಿದೆ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

8 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

35 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

53 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago