ಸಿಕ್ಕಿಂ: ಭಾರತೀಯ ಸೈನಿಕರು ಸೇರಿದಂತೆ 40 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಸಿಕ್ಕಿಂನ ಪ್ರವಾಹದಲ್ಲಿ ಟಾಲಿವುಡ್ ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಅಮೇರಿಕಾದಲ್ಲಿ ನೆಲೆಸಿರುವ ಅವರ ಮಗಳು ನಬಿತಾ ತನ್ನ ತಾಯಿಯನ್ನು ಪತ್ತೆಹಚ್ಚಲು ಸಹಾಯ ಮಾಡುವಂತೆ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಹೈದರಾಬಾದ್ ಮೂಲದ ನಟಿ ಇತ್ತೀಚೆಗೆ ಸಿಕ್ಕಿಂಗೆ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಅ.3 ರಂದು ತಾಯಿಯೊಂದಿಗೆ ಕೊನೆಯ ಬಾರಿ ಮಾತನಾಡಿದ್ದೆ, ಅದಾದ ಬಳಿಕ ಅವರ ಕುರಿತ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಮಗಳು ನಬಿತಾ ಅಳಲು ತೋಡಿಕೊಂಡಿದ್ದಾರೆ.
ಸಿಕ್ಕಿಂ ಪ್ರವಾಹದಿಂದಾಗಿ ಏಳು ಸೈನಿಕರು ಸೇರಿದಂತೆ 26 ಜನರು ಸಾವನ್ನಪ್ಪಿದ್ದಾರೆ. ಇನ್ನು ತೀಸ್ತಾ ನದಿಯ ಪ್ರವಾಹದಲ್ಲಿ ನಾಪತ್ತೆಯಾಗಿರುವ 142 ಜನರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.