Categories: ದೇಶ

ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರನಿಂದ ಸ್ಪೋಟಕ ಹೇಳಿಕೆ

ಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು  ಆರೋಪ ಮಾಡಿದ್ದಾರೆ. ಅಲ್ಲದೆ, ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಹೇಳಿದ್ದಾರೆ.

ಮುಖ್ತಾರ್ ಅನ್ಸಾರಿ ಅವರು ಹೃದಯಾಘಾತದಿಂದ ಆರೋಗ್ಯ ಹದಗೆಟ್ಟ ಕಾರಣ ಗುರುವಾರ ನಿಧನರಾಗಿದ್ದಾರೆ. ಜೈಲಿನಲ್ಲಿದ್ದ ದರೋಡೆಕೋರನನ್ನು ಗಾಜಿಪುರದ ಬಂದಾದಲ್ಲಿರುವ ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.

ಮಂಗಳವಾರ ಸಹ, ಅನ್ಸಾರಿ ಅವರು ಹೊಟ್ಟೆ ನೋವಿನ ಬಗ್ಗೆ ಹೇಳಿಕೊಂಡಾಗ ಆಸ್ಪತ್ರೆಗೆ ಕರೆದೊಯ್ದು ಸುಮಾರು 14 ಗಂಟೆಗಳ ಕಾಲ ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

ಈ ನಡುವೆ ತಂದೆ ಸಾವು ಕುರಿತು ಹೇಳಿಕೆ ನೀಡಿರುವ ಉಮರ್ ಅನ್ಸಾರಿ. ತಂದೆಯ ಸಾವಿನ ಬಗ್ಗೆ ನನಗೆ ಅಧಿಕಾರಿಗಳ ಕಡೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಮಾಧ್ಯಮಗಳ ಮೂಲಕ ನನಗೆ ವಿಷಯ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿಯಾಗಲು ಬಂದಿದ್ದೆ. ಆದರೆ. ನನಗೆ ಅವಕಾಶ ನೀಡಲಿಲ್ಲ. ನಾವು ಮೊದಲೇ ಹೇಳಿದಂತೆ ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಮತ್ತೆ ಹೇಳುತ್ತೇವೆ. ಮಾರ್ಚ್ 19 ರಂದು ಅವರು ರಾತ್ರಿಯ ಊಟದಲ್ಲಿ ವಿಷ ಸೇವಿಸಿದ್ದಾರೆ. ನಾವು ನ್ಯಾಯಾಂಗದ ಮೊರೆ ಹೋಗುತ್ತೇವೆ, ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

Read More:

 

Ashitha S

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

4 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

11 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

24 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

26 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

38 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

45 mins ago