ಸಂಸತ್ ಭವನದ ಸೆಂಟ್ರಲ್ ಹಾಲ್ನ ಸಂವಿಧಾನ್ ಸದನ್ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದರು. ‘ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು’ ಎಂದು ಸಂಸದರನ್ನು ಬೆಂಬಲಿಸಿದರು.