ನವದೆಹಲಿ: ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವ ವಹಿಸಲಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಕೋಟಾವನ್ನು ಒದಗಿಸುವ ಅವಕಾಶವನ್ನು ಹೊಂದಿದೆ.
ಮಂಗಳವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಇದನ್ನು ಮಂಡಿಸಲಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸದನ ಸಭೆಯಲ್ಲಿ ಚರ್ಚಿಸಲಾಗುವುದು.
ಮಂಗಳವಾರ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೊಸ ಸಂಸತ್ ಭವನದಲ್ಲಿ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ʻನಾರಿ ಶಕ್ತಿ ವಂದನ್ ಅಧಿನಿಯಮ್ʼ ಎಂದು ಹೆಸರಿಸಲಾಗಿದೆ.