News Karnataka Kannada
Monday, May 06 2024
ದೇಶ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಮತದಾರರಿಗೆ ಸೋನಿಯಾ ಭಾವುಕ ಪತ್ರ

Soina
Photo Credit : Twitter

ವದೆಹಲಿ: ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತಾವು ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಮತದಾರರಿಗೆ ತಿಳಿಸಿದ್ದಾರೆ.

2004ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ 77 ವರ್ಷದ ಸೋನಿಯಾ, ತಮ್ಮ ಭಾವನಾತ್ಮಕ ಸಂದೇಶದಲ್ಲಿ ತಮ್ಮ ಕುಟುಂಬದ ಸದಸ್ಯರೊಬ್ಬರು ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ‘ನಾನು ಈಗ ಏನಾಗಿದ್ದೇನೋ ಅದೆಲ್ಲವೂ ನಿಮ್ಮಿಂದ ಎಂದು ಹೇಳಲು ಹೆಮ್ಮೆಪಡುತ್ತೇನೆ. ನೀವು ನನ್ನ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. ಈಗ ಆರೋಗ್ಯ ಮತ್ತು ವಯಸ್ಸಿನ ಕಾರಣಗಳಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ’ ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ಈ ನಿರ್ಧಾರದ ಬಳಿಕ ನಾನು ನೇರವಾಗಿ ನಿಮ್ಮ ಸೇವೆ ಮಾಡಲು ಅವಕಾಶ ಸಿಗದಿರಬಹುದು. ಆದರೆ, ನನ್ನ ಆತ್ಮ ಮತ್ತು ಹೃದಯ ಯಾವಾಗಲೂ ನಿಮ್ಮ ಜೊತೆ ಇರಲಿದೆ. ಹಿಂದಿನಂತೆಯೇ, ಭವಿಷ್ಯದಲ್ಲೂ ನೀವು, ನನ್ನ ಮತ್ತು ನನ್ನ ಕುಟುಂಬದ ಜೊತೆ ನಿಲ್ಲುತ್ತೀರಿ ಎಂಬುದು ನನಗೆ ತಿಳಿದಿದೆ’ ಎಂದು ಹಿಂದಿಯಲ್ಲಿ ಬರೆದಿರುವ ಸಂದೇಶದಲ್ಲಿ ಸೋನಿಯಾ ತಿಳಿಸಿದ್ದಾರೆ. .

ರಾಜಸ್ಥಾನದಿಂದ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ಬಳಿಕ ಸೋನಿಯಾ, ರಾಯ್ ಬರೇಲಿ ಮತದಾರರಿಗೆ ಈ ಸಂದೇಶ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು