News Karnataka Kannada
Friday, April 12 2024
Cricket
ತಮಿಳುನಾಡು

ಚೆನ್ನೈ: ಬಿಟೆಕ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Model found dead by hanging
Photo Credit :

ಚೆನ್ನೈ,ಏ.15 :  ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನ ಕೋಣೆಯಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತಳನ್ನು ಸೌಮ್ಯಾ ದೇವಿ (21) ಎಂದು ಗುರುತಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಇಂಜಿನಿಯರಿಂಗ್‍ನಲ್ಲಿ ಬಿಟೆಕ್ ಓದುತ್ತಿದ್ದಳು.

ತಿರುಚ್ಚಿಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‍ಐಟಿ)ಯಲ್ಲಿನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಪ್ರೀತಿಪ್ರೇಮದ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ನಿನ್ನೆ ತಮಿಳು ಹೊಸ ವರ್ಷದ ರಜಾದಿನವಾಗಿದ್ದರಿಂದ, ಮೃತಳ ಸ್ನೇಹಿತೆ ದಕ್ಷಣಾಶ್ರೀ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗಿದ್ದರು. ಸಂಜೆ ವಾಪಸು ಬಂದಾಗ ಸೌಮ್ಯಾದೇವಿ ಸೀಲಿಂಗ್ ಫ್ಯಾನ್‍ಗೆ ನೇತಾಡುತ್ತಿರುವುದು ಕಂಡುಬಂದಿದೆ.

ಕೂಡಲೇ ಹಾಸ್ಟೆಲ್ ವಾರ್ಡನ್ ಹಾಗೂ ಕಾಲೇಜು ಅಕಾರಿಗಳಿಗೆ ವಿಷಯ ಮುಟ್ಟಿಸಿದ್ದಾಳೆ. ಮಾಹಿತಿ ತಿಳಿದ ತುವಕುಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು