News Karnataka Kannada
Sunday, April 14 2024
Cricket
ತಮಿಳುನಾಡು

ತಮಿಳುನಾಡಿನಲ್ಲಿ ರಥೋತ್ಸವದ ಸಂದರ್ಭದಲ್ಲಿ ರಥಕ್ಕೆ ವಿದ್ಯುತ್ ತಂತಿ ತಗುಲಿ ಭಾರೀ ದುರಂತ

Tamil
Photo Credit :

ತಂಜಾವೂರ್: ತಮಿಳುನಾಡಿನಲ್ಲಿ ಸಂಭ್ರಮದ ರಥೋತ್ಸವ ನಡೆಸುತ್ತಿರುವುದರ ಮಧ್ಯೆ ಸೂತಕದ ಛಾಯೆ ಆವರಿಸಿದೆ. ತಂಜಾವೂರು ಜಿಲ್ಲೆಯ ಕಲಿಮೇಡು ಗ್ರಾಮದಲ್ಲಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು ಭಾರೀ ದುರಂತ ಸಂಭವಿಸಿದೆ.

ತಂಜಾವುರ್ ಜಿಲ್ಲೆ ಕಲಿಮೇಡು ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ 94ನೇ ಅಪ್ಪರ ಗುರುಪೂಜೆ ಅಂಗವಾಗಿ ರಥೋತ್ಸವ ನಡೆಸಲಾಗುತ್ತಿತ್ತು. ಮಂಗಳವಾರ ರಾತ್ರಿ ನಡೆದ ರಥೋತ್ಸವದಲ್ಲಿ ನೂರಾರು ಭಕ್ತಾಧಿಗಳು ಭಾಗವಹಿಸಿದ್ದರು. ಈ ವೇಳೆ ರಥ ಎಳೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿಯೊಂದು ರಥಕ್ಕೆ ತಗುಲಿದ್ದು, ಸ್ಥಳದಲ್ಲೇ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಪ್ರಾಣ ಬಿಟ್ಟಿದ್ದಾರೆ.

ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಟ್ಟು ಮೃತ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಗೊಂಡ ರೋಗಿಗಳನ್ನು ದಾಖಲಿಸಿರುವ ತಂಜಾವೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕೇಂದ್ರ ವಲಯ ತಿರುಚಿರಾಪಳ್ಳಿಯ ಐಜಿಪಿ ವಿ ಬಾಲಕೃಷ್ಣನ್ ಮತ್ತು ತಂಜಾವೂರು ಎಸ್ಪಿ ರವಳಿ ಪ್ರಿಯಾ ಭೇಟಿ ನೀಡಿದರು.

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ:

ತಂಜಾವೂರ್ ಜಿಲ್ಲೆಯ ಕಲಿಮೇಡು ಗ್ರಾಮದ ಅಯ್ಯಪ್ಪ ಸ್ವಾಮಿಯ ರಥೋತ್ಸವದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ:

ತಂಜಾವೂರ್ ಜಿಲ್ಲೆಯಲ್ಲಿ ರಥೋತ್ಸವದ ವೇಳೆ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು