News Karnataka Kannada
Friday, April 12 2024
Cricket
ತಮಿಳುನಾಡು

ತಮಿಳುನಾಡು: ಸಾವಿರ ವರ್ಷ ಹಳೆಯ 80 ದೇವಾಲಯಗಳ ನವೀಕರಣಕ್ಕೆ ಸಿದ್ಧತೆ

Temple
Photo Credit :

ತಮಿಳುನಾಡು: ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು 1,000 ವರ್ಷಗಳಷ್ಟು ಹಳೆಯದಾದ 80 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲಿದೆ. ರಾಜ್ಯ ಸರ್ಕಾರವು ರಾಜಕೀಯ ಲಾಭಕ್ಕಾಗಿ ಹಿಂದೂಗಳ ದೇವಾಲಯ ನವೀಕರಿಸುತ್ತಿಲ್ಲ, ದೇಗುಲಗಳ ಜೀರ್ಣೋದ್ಧಾರ ನಮ್ಮ ಜವಾಬ್ದಾರಿಯಾಗಿದೆ ಎಂದು ಸಚಿವ ಪಿ.ಕೆ. ಶೇಖರ್ ಬಾಬು ಹೇಳಿದ್ದಾರೆ.

ರಾಜ್ಯದ ಆರು ದೇವಸ್ಥಾನಗಳಿಗೆ 27.70 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಿಸಲಾಗುವುದು. ಇನ್ನೂ 10 ದೇವಸ್ಥಾನಗಳಲ್ಲಿ ಅನ್ನದಾನ ಆರಂಭಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

11 ಕೋಟಿ ವೆಚ್ಚದಲ್ಲಿ 14 ದೇವಸ್ಥಾನಗಳಲ್ಲಿ ನೂತನ ಅನ್ನದಾನ ಸಭಾಂಗಣಗಳನ್ನು ನಿರ್ಮಿಸಲಾಗುವುದು ಮತ್ತು ಎಲ್ಲ ಭಕ್ತರಿಗೆ ಪ್ರಸಾದ ನೀಡುವ ಯೋಜನೆಯನ್ನು ಇನ್ನೂ ಐದು ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ವಿಗ್ರಹ ಚೋರರಿಂದ ತಮಿಳುನಾಡು ಪೊಲೀಸರು ವಶಪಡಿಸಿಕೊಂಡ ವಿಗ್ರಹಗಳನ್ನು ಚೆನ್ನೈನ ಕಪಾಲೀಶ್ವರ ದೇವಸ್ಥಾನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರದರ್ಶಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ಕೇಂದ್ರವು ಆಧ್ಯಾತ್ಮಿಕ ಗ್ರಂಥಾಲಯ, ಸಣ್ಣ ಸಭಾಂಗಣ, ಪುಸ್ತಕ ಮಳಿಗೆ ಮತ್ತು ಪ್ರಕಾಶನ ಕೇಂದ್ರವನ್ನು ಸಹ ಹೊಂದಿರುತ್ತದೆ.

ಕೋವಿಲ್ ಪಥಗೈಯ ಸುಂದರರಾಜ ಪೆರುಮಾಳ್ ದೇವಸ್ಥಾನದಲ್ಲಿ ಬೃಹತ್ ಗೋಶಾಲೆಯನ್ನು ಸ್ಥಾಪಿಸಲಾಗುವುದು ಮತ್ತು ಈ ಯೋಜನೆಗೆ 20 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದರೊಂದಿಗೆ ಇಲಾಖೆಯು ಈಗಿರುವ 121 ಗೋಶಾಲೆಗಳನ್ನು 20 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು